ಕರ್ನಾಟಕ

karnataka

ETV Bharat / state

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ - North Karnataka Flood

ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವ ಕಾರಣ ರೈತರು ತಮ್ಮ ಜಮೀನುಗಳನ್ನು ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದಾರೆ. ತಕ್ಷಣ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಕೈಬಿಡಬೇಕೆಂದು ರೈತರು ಒತ್ತಾಯಿಸಿದ್ದಾರೆ.

Farmers protest over  fullfill several demands
ವಿವಿಧ ಬೇಡಿಕೆಗಳ ಈಡೇರಿಸುವಂತೆ ರೈತರಿಂದ ಪ್ರತಿಭಟನೆ

By

Published : Sep 1, 2020, 5:42 PM IST

ವಿಜಯಪುರ: ಪ್ರವಾಹದಿಂದ ಹಾನಿಗೊಳಗಾದ ರೈತರ ಬೆಳೆಗಳಿಗೆ ಸೂಕ್ತ ಪರಿಹಾರ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯಿಂದ ನಗರದ ಜಿಲ್ಲಾಧಿಕಾರಿ ನಿವಾಸದ ಎದುರು ಪ್ರತಿಭಟನೆ ನಡೆಸಲಾಯಿತು.

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

ಉತ್ತರ ಕರ್ನಾಟಕದ 5 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿ ರೈತರು ಬೆಳೆದ ಬೆಳೆ ನಾಶವಾಗಿದೆ. ಆದರೆ ಇಲ್ಲಿಯವರೆಗೆ ಯಾವುದೇ ಪರಿಹಾರವನ್ನು ಘೋಷಣೆ ಮಾಡಿಲ್ಲ. ಸಾಲ ಮಾಡಿ ರೈತ ಬೆಳೆ ಬೆಳೆದಿದ್ದಾನೆ. ಆದರೆ ಪ್ರವಾಹದಿಂದ ಆ ಬೆಳೆ ನಷ್ಟವಾಗಿದೆ. ರೈತರಿಗೆ ಕೂಡಲೇ ಪರಿಹಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವ ಕಾರಣ ರೈತರು ತಮ್ಮ ಜಮೀನುಗಳನ್ನು ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದಾರೆ. ತಕ್ಷಣ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಕೈಬಿಡಬೇಕು ಎಂದು ಒತ್ತಾಯಿಸಿದರು. ಈ ವೇಳೆ ಮಸೂತಿ ಸಿದ್ದಲಿಂಗ ದೇವರು, ಉತ್ತರ ಕರ್ನಾಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ಮಹೇಶಗೌಡ ಸುಬೇದಾರ, ರಾಹುಲ್ ಕುಬಕಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ABOUT THE AUTHOR

...view details