ವಿಜಯಪುರ:ಮಹಾರಾಷ್ಟ್ರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಉಜನಿ ಹಾಗೂ ಮೀರಾ ಜಲಾಶಯದಿಂದ ಭೀಮಾ ನದಿಗೆ ಹೆಚ್ಚುವರಿ ನೀರು ಬಿಡುಗಡೆಯಾಗಿದ್ದು, ಮತ್ತೊಮ್ಮೆ ಈ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.
ಭೀಮಾನದಿಯಲ್ಲಿ ಪ್ರವಾಹದ ಭೀತಿ: ತಾರಾಪುರ ಗ್ರಾಮ ಸ್ಥಳಾಂತರಕ್ಕೆ ಜನರ ಒತ್ತಾಯ - latest vijayapura news
ಮಹಾರಾಷ್ಟ್ರದ ಉಜನಿ ಹಾಗೂ ಮೀರಾ ಜಲಾಶಯದಿಂದ ಭೀಮಾ ನದಿಗೆ ಹೆಚ್ಚುವರಿ ನೀರು ಬಿಡುಗಡೆಯಾಗಿದ್ದು, ಮತ್ತೊಮ್ಮೆ ವಿಜಯಪುರ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.
ಭೀಮಾನದಿಯಲ್ಲಿ ಪ್ರವಾಹದ ಭೀತಿ.....ಗ್ರಾಮ ಸ್ಥಳಾಂತರಕ್ಕೆ ಸಾರ್ವಜನಿಕರ ಒತ್ತಾಯ
ಜಿಲ್ಲೆಯ ಭೀಮಾ ನದಿ ತಟದಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ಭೀಮಾನದಿಯ ಸೊನ್ನ ಬ್ಯಾರೇಜಿನ ಹಿನ್ನೀರಿನಿಂದ ತಾರಾಪುರ ಗ್ರಾಮಕ್ಕೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ತಾರಾಪುರ-ಆಲಮೇಲ ರಸ್ತೆ ಜಲವೃತವಾಗಿದ್ದು, ಸಂಪರ್ಕ ಕಡಿತಗೊಂಡಿದೆ.
ಈ ಹಿನ್ನೆಲೆಯಲ್ಲಿ ಗ್ರಾಮ ಸ್ಥಳಾಂತರಿಸುವಂತೆ ಮತ್ತೊಮ್ಮೆ ಕೂಗು ಕೇಳಿ ಬಂದಿದ್ದು, ಸ್ಥಳಾಂತರ ವಿಚಾರ ಬಗೆಹರಿಯದ ಸಮಸ್ಯೆಯಾಗಿದೆ. ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳ ಎಡವಟ್ಟಿನಿಂದ ಸಮಸ್ಯೆ ಹೆಚ್ಚಾಗಿದ್ದು, ತಾರಾಪುರ ಗ್ರಾಮ ಸ್ಥಳಾಂತರಿಸುವಂತೆ ಜನರು ಒತ್ತಾಯಿಸಿದ್ದಾರೆ.