ವಿಜಯಪುರ :ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ. ಹಾಗಾಗಿ ಇದರ ವಿರುದ್ಧ ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ ವತಿಯಿಂದ ಜೂನ್ 27 ರಿಂದ ಜುಲೈ 3ರವರೆಗೆ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ ತಿಳಿಸಿದ್ದಾರೆ.
ಜೂನ್ 27ರಿಂದ ಜುಲೈ 3ರವರೆಗೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ
'ರಾಜ್ಯಾದ್ಯಂತ 1,000 ಸ್ಥಳಗಳಲ್ಲಿ ಹೋರಾಟ ನಡೆಸಲು ನಿರ್ಧರಿಸಲಾಗಿದೆ. ಬಿಜೆಪಿ ಸರ್ಕಾರ ಮಾಫಿಯಾಗಳನ್ನ ಸೃಷ್ಟಿ ಮಾಡುವ ಮೂಲಕ ರೈತರನ್ನ ಹಾಳು ಮಾಡಲು ಪ್ರಯತ್ನಿಸುತ್ತಿದೆ'..
ಜೂನ್ 27 ರಿಂದ ಜುಲೈ 3ರ ವರೆಗೆ ರಾಜ್ಯ ಸರ್ಕಾರದ ವಿರುದ್ದ ಹೋರಾಟ: ರೈತ ಮುಖಂಡ ಮಾರುತಿ ಮಾನ್ಪಡೆ
ನಗರದಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ 1,000 ಸ್ಥಳಗಳಲ್ಲಿ ಹೋರಾಟ ನಡೆಸಲು ನಿರ್ಧರಿಸಲಾಗಿದೆ. ಬಿಜೆಪಿ ಸರ್ಕಾರ ಮಾಫಿಯಾಗಳನ್ನ ಸೃಷ್ಟಿ ಮಾಡುವ ಮೂಲಕ ರೈತರನ್ನ ಹಾಳು ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
10 ರೈತ ಸಂಘಟನೆಗಳು ಸೇರಿ ಸಮಿತಿ ರಚಿಸಲಾಗಿದೆ. ಜಿಲ್ಲೆಯಲ್ಲಿ ಒಂದು ವಾರಗಳ ಕಾಲ 50 ಕಡೆಗಳಲ್ಲಿ ಹೋರಾಟ ನಡೆಸಲಾಗುವುದು ಎಂದರು.