ವಿಜಯಪುರ : ಕೊರೊನಾ ಹಿನ್ನೆಲೆ ಮಾಸ್ಕ್ ಧರಿಸದ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಇರುವವರ ಮೇಲೆ ದಂಡ ವಿಧಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್ ತಿಳಿಸಿದ್ದಾರೆ.
ಮಾಸ್ಕ್ ಧರಿಸದ - ಸಾಮಾಜಿಕ ಅಂತರ ಕಾಯ್ದುಕೊಳ್ಳದವರಿಂದ ದಂಡ ವಸೂಲಾತಿ: ಡಿಸಿ ಎಚ್ಚರಿಕೆ - ಅಂತರ ಕಾಯ್ದುಕೊಳ್ಳದವರಿಂದ ದಂಡ ವಸೂಲಾತಿ
ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶದಲ್ಲಿ 200 ರೂ. ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿ ಪ್ರದೇಶವನ್ನು ಹೊರತುಪಡಿಸಿ (ನಗರ ಮತ್ತು ಗ್ರಾಮೀಣ ಪ್ರದೇಶ)ಗಳಲ್ಲಿ 100 ರೂ. ದಂಡವನ್ನು ತಪ್ಪಿತಸ್ಥರಿಂದ ವಸೂಲಿ ಮಾಡಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶದಲ್ಲಿ 200 ರೂ. ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿ ಪ್ರದೇಶವನ್ನು ಹೊರತುಪಡಿಸಿ (ನಗರ ಮತ್ತು ಗ್ರಾಮೀಣ ಪ್ರದೇಶ)ಗಳಲ್ಲಿ 100 ರೂ. ದಂಡವನ್ನು ತಪ್ಪಿತಸ್ಥರಿಂದ ವಸೂಲಿ ಮಾಡಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಸಾರ್ವಜನಿಕ ಪ್ರದೇಶಗಳಲ್ಲಿ ಕನಿಷ್ಠ 6 ಅಡಿಗಳ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಅಂಗಡಿ, ಮುಂಗಟ್ಟುಗಳ ಮುಂದೆ ದೈಹಿಕ ಅಂತರವನ್ನು ಕಾಯ್ದುಕೊಳ್ಳದ, ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವವರ ಹಾಗೂ ಮಾಸ್ಕ್ ಧರಿಸದೇ ಇರುವವರಿಂದ ಈ ದಂಡವನ್ನು ವಸೂಲಿ ಮಾಡಲಾಗುತ್ತದೆ. ಈ ಎಲ್ಲವನ್ನು ಪಾಲಿಸಿ ಸಾರ್ವಜನಿಕರು ಕೊರೋನಾ -19 ಸೋಂಕನ್ನು ನಿಯಂತ್ರಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಸುನೀಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.