ವಿಜಯಪುರ: ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಮತ್ತೆ ಪ್ರವಾಹ ಸ್ಥಿತಿ ಎದುರಾಗಿದೆ. ಮಹಾರಾಷ್ಟ್ರದ ಉಜನಿ ಜಲಾಶಯದಿಂದ ರಾಜ್ಯದ ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವ ಕಾರಣ ನದಿ ತೀರದ ಜನರಲ್ಲಿ ಆತಂಕ ಹೆಚ್ಚಾಗಿದೆ.
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದ ಉಜನಿ ಜಲಾಶಯ ತುಂಬಿ ಹರಿಯುತ್ತಿದೆ. ಹೀಗಾಗಿ ಹೆಚ್ಚುವರಿ ನೀರನ್ನು ಭೀಮಾ ನದಿಗೆ ಹರಿಬಿಡಲಾಗುತ್ತಿದೆ. ನಿನ್ನೆಯವರೆಗೆ ಉಜನಿ ಜಲಾಶಯದ ನೀರು ಚಡಚಣ ತಾಲೂಕಿನ ದಸೂರಿನಿಂದ ಭೀಮಾ ನದಿ ಪಾತ್ರದ ಉಮರಜ್, ಉಮರಾಣಿ, ಶಿರನಾಳ, ಹಿಂಗಣಿ, ಧೂಳಖೇಡ ಗ್ರಾಮಗಳ ಬಳಿ ಇರುವ ಬ್ರೀಜ್ ಕಂ ಬ್ಯಾರೇಜ್ಗಳು ಮತ್ತೊಮ್ಮೆ ತುಂಬಿ ಹರಿಯುತ್ತಿವೆ.
ಹೆಚ್ಚುವರಿ ನೀರು ಹರಿದು ಬಂದ ಕಾರಣ ಉಮರಾಣಿ, ಹಿಂಗಣಿ, ಶಿರನಾಳ ಸಂಪರ್ಕ ಕಲ್ಪಿಸುವ ಸೇತುವೆಗಳ ಮೇಲೆ ಸಂಪರ್ಕ ಕಡಿತಗೊಂಡಿದೆ. ಮಹಾರಾಷ್ಟ್ರದಲ್ಲಿ ಮತ್ತೆ ಮಳೆ ಪ್ರಮಾಣ ಹೆಚ್ಚಳವಾದರೆ, ಭೀಮಾ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿದೆ.