ವಿಜಯಪುರ :ಕೃಷ್ಣಾ ನದಿಗೆ ಜಿಗಿದ್ದು ಅರಣ್ಯಾಧಿಕಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಕೃಷ್ಣಾ ನದಿಯಲ್ಲಿ ನಡೆದಿದೆ. ಕೊಲ್ಹಾರ ವಲಯ ಅರಣ್ಯ ಇಲಾಖೆಯ ಅರಣ್ಯ ರಕ್ಷಕ ಈರಪ್ಪ ದುಂಡಪ್ಪ ದಟ್ಟಿ ಆತ್ಮಹತ್ಯೆ ಮಾಡಿಕೊಂಡವರು.
ವಿಜಯಪುರ : ಕೃಷ್ಣಾ ನದಿಗೆ ಹಾರಿ ಅರಣ್ಯಾಧಿಕಾರಿ ಆತ್ಮಹತ್ಯೆ! - ವಿಜಯಪುರ ಲೇಟೆಸ್ಟ್ ಕ್ರೈಂ ನ್ಯೂಸ್
ಕೊಲ್ಹಾರ ಸೇತುವೆಯ ಮೇಲಿಂದ ಹಾರಿ ಕೊಲ್ಹಾರ ವಲಯ ಅರಣ್ಯ ಇಲಾಖೆಯ ಅರಣ್ಯ ರಕ್ಷಕ ಈರಪ್ಪ ದುಂಡಪ್ಪ ದಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ..
ಈರಪ್ಪ ದುಂಡಪ್ಪ ದಟ್ಟಿ ಆತ್ಮಹತ್ಯೆ ಮಾಡಿಕೊಂಡ ಅರಣ್ಯಾಧಿಕಾರಿ
ಸುಮಾರು 8 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದ ನಿವಾಸಿ ಈರಪ್ಪ ದುಂಡಪ್ಪ ದಟ್ಟಿ ಗುರುವಾರ ಮಧ್ಯಾಹ್ನ ಕೃಷ್ಣಾ ನದಿ ಸೇತುವೆ ಮೇಲೆ ತನ್ನ ಬೈಕ್ ನಿಲ್ಲಿಸಿದ್ದಾರೆ. ಬೈಕ್‌ನಲ್ಲಿ ಮೊಬೈಲ್ ಹಾಗೂ ಹಗ್ಗವನ್ನಿಟ್ಟು ತನ್ನ ಅರಣ್ಯ ಇಲಾಖೆಯ ಸಮವಸ್ತ್ರ ಸಹಿತ ಸೇತುವೆ ಮೇಲಿಂದ ನದಿಗೆ ಹಾರಿರಬಹುದು ಎಂದು ಶಂಕಿಸಲಾಗಿದೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.