ವಿಜಯಪುರ: ಕೊರೊನಾ ತಡೆಗಟ್ಟಲು ಆರೋಗ್ಯ ಇಲಾಖೆಯಿಂದ ಜಾಗೃತಿ ಮೂಡಿಸಲಾಗುತ್ತಿದ್ದು, ಜಿಲ್ಲಾ ಮಟ್ಟದ ಸಮಿತಿ ರಚನೆ ಮಾಡಲಾಗಿದೆ. ಇದುವರೆಗೆ 76 ಜನ ವಿದೇಶದಿಂದ ಜಿಲ್ಲೆಗೆ ಮರಳಿ ಬಂದಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ತಡೆಗಟ್ಟಲು ಆರೋಗ್ಯ ಇಲಾಖೆಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ಅಧಿಕಾರಿಗಳೊಂದಿಗೆ 7 ಸಭೆ ನಡೆಸಲಾಗಿದ್ದು, ಇದುವರೆಗೂ ಯಾವುದೇ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಇರುವುದು ಖಚಿತವಾಗಿಲ್ಲ. ಸರ್ಕಾರದ ಆದೇಶಗಳನ್ನು ಜಿಲ್ಲೆಯಲ್ಲಿ ಪಾಲಿಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ನಗರದ ಗೋಲ್ ಗುಂಬಜ್‌ಗೆ ಪ್ರವಾಸಿಗರ ಭೇಟಿ ನಿಷೇಧ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವರಿಗೆ ಮನವರಿಗೆ ಮಾಡಿದರು.