ಕರ್ನಾಟಕ

karnataka

ETV Bharat / state

ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ಗ್ರಾಪಂ ಸದಸ್ಯ ಸಾವು - ವಿಜಯಪುರದಲ್ಲಿ ಮಾಜಿ ಗ್ರಾಪಂ ಸದಸ್ಯ ಸಾವು

ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ಗ್ರಾಪಂ ಸದಸ್ಯ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ತಡರಾತ್ರಿ ನಡೆದಿದೆ.

former GP member died in Vijayapura, former GP member died in road accident, Vijayapura crime news, ವಿಜಯಪುರದಲ್ಲಿ ಮಾಜಿ ಗ್ರಾಪಂ ಸದಸ್ಯ ಸಾವು, ರಸ್ತೆ ಅಪಘಾತದಲ್ಲಿ ಮಾಜಿ ಗ್ರಾಪಂ ಸದಸ್ಯ ಸಾವು, ವಿಜಯಪುರ ಅಪರಾಧ ಸುದ್ದಿ,
ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ಗ್ರಾಪಂ ಸದಸ್ಯ ಸಾವು

By

Published : Jan 28, 2022, 9:57 AM IST

ವಿಜಯಪುರ:ಎದುರುಗಡೆ ಬಂದ್ ಕಾರೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವಿಜಯಪುರ ತಾಲೂಕಿನ ಸಿಂದಗಿ ರಸ್ತೆಯ ಲಕ್ಷ್ಮಿ ದೇಗುಲ ಬಳಿ ತಡರಾತ್ರಿ ನಡೆದಿದೆ.

ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ಗ್ರಾಪಂ ಸದಸ್ಯ ಸಾವು

ಮಾಜಿ ಗ್ರಾಪಂ ಸದಸ್ಯ ಮೋಹನ್ ರಾಠೋಡ್ (42) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಮೃತ ಬೈಕ್ ಸವಾರ ಹಡಗಲಿ ಎಲ್​.ಟಿ ಗ್ರಾಮದ ನಿವಾಸಿಯಾಗಿದ್ದು, ಸಂಜೆ ವಿಜಯಪುರದಿಂದ ಹಡಗಲಿಗೆ ಹೋಗುವಾಗ ಅಪಘಾತ ಸಂಭವಿಸಿದೆ.

ಓದಿ:ಫೆಡರಲ್​​​​ ಬ್ಯಾಂಕ್​ ನೀತಿ ಭೀತಿ.. ಶೇ 1 ರಷ್ಟು ಕುಸಿತ ಕಂಡ ಮುಂಬೈ ಷೇರುಪೇಟೆ

ಸಿಂದಗಿ ಕಡೆಯಿಂದ ವಿಜಯಪುರಕ್ಕೆ ಬರುತ್ತಿದ್ದ ಕಾರೊಂದು ಇವರ ಬೈಕ್​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೋಹನ್​ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾರು ಬೈಕ್ ಮುಖಾಮುಖಿ ಡಿಕ್ಕಿ ಸವಾರ ಸಾವು

ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details