ಕರ್ನಾಟಕ

karnataka

ETV Bharat / state

ಮಾಜಿ ಆರೋಗ್ಯ ಸಚಿವ ಶಿವಾನಂದ ಪಾಟೀಲಗೆ ತಗುಲಿದ ಕೊರೊನಾ - ಮಾಜಿ ಆರೋಗ್ಯ ಸಚಿವ ಶಿವಾನಂದ ಪಾಟೀಲ

ಹಾಲಿ ಬಸವನಬಾಗೇವಾಡಿ ಶಾಸಕ, ಮಾಜಿ ಸಚಿವ ಶಿವಾನಂದ ಪಾಟೀಲರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಅವರು ಏಳು ದಿನಗಳ ಕಾಲ‌ ಹೋಮ್ ಐಸೋಲೇಷನ್​​ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

Former health minister Sivananda Patil had corona
ಹಾಲಿ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲರಿಗೆ ಕೊರೊನಾ

By

Published : Jan 18, 2022, 5:41 PM IST

ವಿಜಯಪುರ: ಮಾಜಿ ಆರೋಗ್ಯ ಸಚಿವ ಹಾಗೂ ಹಾಲಿ ಬಸವನಬಾಗೇವಾಡಿ ಕ್ಷೇತ್ರದ ಶಾಸಕ ಶಿವಾನಂದ ಪಾಟೀಲ ಅವರಿಗೆ ಕೊರೊನಾ ಸೋಂಕು ತಗುಲಿದೆ.

ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡ ಪತ್ರ

ಕಳೆದ 2-3 ದಿನಗಳಿಂದ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಕೋವಿಡ್ ಸ್ಯ್ವಾಬ್ ಟೆಸ್ಟ್ ಮಾಡಿಸಿದಾಗ, ವರದಿಯಲ್ಲಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆ ಏಳು ದಿನಗಳ ಕಾಲ‌ ಹೋಮ್ ಐಸೋಲೇಷನ್​​ನಲ್ಲಿ ಇರುವಂತೆ ಅವರಿಗೆ ವೈದ್ಯರು ಸೂಚಿಸಿದ್ದಾರೆ.

ಇದನ್ನೂ ಓದಿ: ಲಸಿಕಾಕರಣ ಚುರುಕುಗೊಳಿಸಿ: ಜಿಲ್ಲಾಡಳಿತಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

ತಮ್ಮ ಜತೆ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಶಾಸಕರು ಸಲಹೆ ನೀಡಿದ್ದಾರೆ. ಅಲ್ಲದೇ ಬಸವನಬಾಗೇವಾಡಿ‌ ಕ್ಷೇತ್ರದ ಜನರನ್ನು ಒಂದು ವಾರದ ನಂತರ ಭೇಟಿಯಾಗುವುದಾಗಿ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ABOUT THE AUTHOR

...view details