ETV Bharat Karnataka

ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಕಾಂಗ್ರೆಸ್​​ ಅಧಿಕಾರಕ್ಕೆ ಬರುವುದು ಖಚಿತ : ಎಂ ಬಿ ಪಾಟೀಲ್​​ - ಈಟಿವಿ ಭಾರತ ಕನ್ನಡ

ರಾಜ್ಯದಲ್ಲಿ ಕಾಂಗ್ರೆಸ್​ 130-140 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಅಧಿಕಾರಕ್ಕೆ ಬರುವುದು ಖಚಿತ ಎಂದು ಮಾಜಿ ಸಚಿವ ಎಂ ಬಿ ಪಾಟೀಲ್​​ ಹೇಳಿದ್ದಾರೆ.

Etv Bharat
Etv Bharat
author img

By

Published : May 10, 2023, 4:31 PM IST

ರಾಜ್ಯದಲ್ಲಿ ಕಾಂಗ್ರೆಸ್​​ ಅಧಿಕಾರಕ್ಕೆ ಬರುವುದು ಖಚಿತ : ಎಂ ಬಿ ಪಾಟೀಲ್​​

ವಿಜಯಪುರ :ವಿಧಾನಸಭೆ ಚುನಾವಣೆ ಹಿನ್ನೆಲೆ ಇಂದು ನಗರದ ಕಲಾ ಕಾಲೇಜಿನಲ್ಲಿ ಮಾಜಿ ಸಚಿವ ಎಂ.ಬಿ ಪಾಟೀಲ್​​ ಅವರು ಪತ್ನಿ ಆಶಾ ಪಾಟೀಲ‌ ಜೊತೆ ಆಗಮಿಸಿ ಬೂತ್ ನಂ 38ರಲ್ಲಿ ಮತದಾನ ಮಾಡಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು. ವಿಜಯಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಜೊತೆಗೆ ಬಬಲೇಶ್ವರ ಮತಕ್ಷೇತ್ರದಲ್ಲಿ ತಾವು ಭಾರಿ ಅಂತರದಿಂದ ಗೆಲುವು ಸಾಧಿಸುವುದಾಗಿ ಹೇಳಿದ್ರು.

ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನ್ನಮ್ಮನವರ್ ಪತ್ನಿ ಸಮೇತರಾಗಿ ಆಗಮಿಸಿ ಇಲ್ಲಿನ ಅಂಬೇಡ್ಕರ್ ಕ್ರೀಡಾಂಗಣ ಬಳಿ ಸ್ಥಾಪಿಸಿದ ಮತಗಟ್ಟೆ 50ರಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದರು.

ಕ್ಷೇತ್ರದಲ್ಲಿ ಬೆಳಗ್ಗೆಯಿಂದಲೇ ಬಿರುಸಿನ ಮತದಾನ ನಡೆಯುತ್ತಿದೆ. ಸಿದ್ದೇಶ್ವರ ವಾಣಿಜ್ಯ ಕಾಲೇಜಿನಲ್ಲಿ ಸ್ಥಾಪಿಸಿದ ಮತಗಟ್ಟೆಯಲ್ಲಿ 95 ವರ್ಷ ವಯಸ್ಸಿನ ವೃದ್ಧೆ ತನ್ನ ಮೊಮ್ಮಗ ಹಾಗೂ ಮಗನ ಸಹಾಯದೊಂದಿಗೆ ಬೈಕ್ ನಲ್ಲಿ ಆಗಮಿಸಿ ಮತ ಚಲಾಯಿಸಿದರು. ನಂತರ ಮಗನ ಜತೆ ಬೈಕ್ ನಲ್ಲಿ ಮನೆಗೆ ತೆರಳಿದರು.

ಇಂಡಿ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದಾರ, ನಾಗಠಾಣದಲ್ಲಿ ಬಿಜೆಪಿ ಅಭ್ಯರ್ಥಿ ಸಂಜೀವ ಐಹೊಳಿ ಹಾಗೂ ಮುದ್ದೇಬಿಹಾಳದಲ್ಲಿ ಬಿಜೆಪಿ ಅಭ್ಯರ್ಥಿ ಎ‌.ಎಸ್ ಪಾಟೀಲ ನಡಹಳ್ಳಿ ಅವರು ಪತ್ನಿ ಹಾಗೂ ಪುತ್ರನ ಜೊತೆ ಆಗಮಿಸಿ ಮತ ಚಲಾವಣೆ ಮಾಡಿದರು.

ಇದನ್ನೂ ಓದಿ :ಚಿತ್ರದುರ್ಗದಲ್ಲಿ ಮಠಾಧೀಶರಿಂದ ಹಕ್ಕು ಚಲಾವಣೆ-ವಿಡಿಯೋ

ABOUT THE AUTHOR

...view details