ಮುದ್ದೇಬಿಹಾಳ (ವಿಜಯಪುರ): ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಬಲ ಕುಗ್ಗಿದ್ದು, ಜೆಡಿಎಸ್ ಸದಸ್ಯರು ಕಾಂಗ್ರೆಸ್ಗೆ ಬಲ ತುಂಬಲು ಸೇರ್ಪಡೆಯಾಗಿದ್ದಾರೆ ಎಂದು ಮಾಜಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದ್ದಾರೆ.
ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಬಲ ಕುಗ್ಗಿದೆ: ಸಿ.ಎಸ್.ನಾಡಗೌಡ
ಉತ್ತರ ಕರ್ನಾಟಕ ಭಾಗದ ಜೆಡಿಎಸ್ನ ಇಬ್ಬರು ಸದಸ್ಯರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎಂದು ಮಾಜಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ತಿಳಿಸಿದರು.
ಮುದ್ದೇಬಿಹಾಳ ಪುರಸಭೆ ಫಲಿತಾಂಶದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಟ್ಟು ಹದಿನೈದು ಸಂಖ್ಯಾ ಬಲದ ಮೇಲೆ ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಸದಸ್ಯರು ಹಾಗೂ ಪಕ್ಷೇತರರು ಪುರಸಭೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಅವರಿಗೆ ಅಭಿನಂದಿಸುತ್ತೇನೆ. ಪಟ್ಟಣದ ಅಭಿವೃದ್ಧಿಗೆ ಶ್ರಮಿಸಿ ಹೆಚ್ಚಿನ ಒತ್ತು ಕೊಟ್ಟು ಮೂಲೆ-ಮೂಲೆಯಲ್ಲೂ ವ್ಯತ್ಯಾಸವಿಲ್ಲದೆ ಅಭಿವೃದ್ಧಿ ಮಾಡಲಿ ಎಂದು ಹೇಳಿದರು.
ಇದೇ ವೇಳೆ ಉತ್ತರ ಕರ್ನಾಟಕ ಭಾಗದ ಜೆಡಿಎಸ್ನ ಇಬ್ಬರು ಸದಸ್ಯರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎಂದರು.