ವಿಜಯಪುರ:ನಗರದ ಗಾಂಧಿಚೌಕ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ನಾಲ್ವರು ಮನೆಗಳ್ಳರನ್ನು ಬಂಧಿಸಿದ್ದಾರೆ.
ನಾಲ್ವರು ಮನೆಗಳ್ಳರ ಬಂಧನ: 6.94 ಲಕ್ಷ ಮೌಲ್ಯದ ಚಿನ್ನಾಭರಣ ವಶ - Four thieves arrested by police
ವಿಜಯಪುರ ನಗರದ ಗಾಂಧಿಚೌಕ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ನಾಲ್ವರು ಮನೆಗಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಾಲ್ವರು ಮನೆಗಳ್ಳರ ಬಂಧನ
ವಿಜಯಪುರ ನಗರದ ಆರೋಪಿಗಳಾದ ರಫಿಕ್ ಬೇಪಾರಿ (25), ಶಾಹಿತ ಕಮತಗಿ (22), ಅಶ್ಪಾಕ್ ಶೇಕ್(25), ಆರೀಫ್ ಕಡದೇಕರ (37) ಬಂಧಿತ ಆರೋಪಿಗಳು. ಬಂಧಿತರಿಂದ 6.94 ಲಕ್ಷ ರೂ. ಮೌಲ್ಯದ 173 ಗ್ರಾಂ ಚಿನ್ನಾಭರಣ, 54 ಗ್ರಾಂ ಬೆಳ್ಳಿಯ ಆಭರಣಗಳನ್ನ ವಶಪಡಿಸಿಕೊಳ್ಳಲಾಗಿದೆ.
ವಿಜಯಪುರ ಸಿಪಿಐ ಎಸ್. ಆರ್. ಕಾಂಬಳೆ, ಗಾಂಧಿಚೌಕ್ ಸಿಪಿಐ ರವೀಂದ್ರ ನಾಯ್ಕೋಡಿ, ಪಿಎಸ್ಐ ಎಸ್.ಪಿ.ಗೌಡರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿತ್ತು. ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.