ಕರ್ನಾಟಕ

karnataka

ETV Bharat / state

ಗಾಂಧೀಜಿ 150ನೇ ಜಯಂತಿ: ಬಿಎಲ್‍ಡಿಇ ಡೀಮ್ಡ್ ವಿವಿ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ - ಗಾಂಧೀಜಿಯವರ 150ನೇ ಜನ್ಮದಿನ

ಮಹಾತ್ಮ ಗಾಂಧೀಜಿಯವರ 150ನೇ ಜನ್ಮದಿನ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ 114ನೇ ಜನ್ಮದಿನದ ಅಂಗವಾಗಿ ವಿಜಯಪುರದ ಬಿಎಲ್‍ಡಿಇ ಡೀಮ್ಡ್ ವಿಶ್ವವಿದ್ಯಾಲಯ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಗಾಂಧೀಜಿ 150ನೇ ಜನ್ಮದಿನ ಹಿನ್ನಲೆ ಬಿಎಲ್‍ಡಿಇ ಡೀಮ್ಡ್ ವಿಶ್ವವಿದ್ಯಾಲಯ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

By

Published : Oct 2, 2019, 11:34 PM IST

ವಿಜಯಪುರ: ಬಿಎಲ್‍ಡಿಇ ಡೀಮ್ಡ್ ವಿಶ್ವವಿದ್ಯಾಲಯ ವತಿಯಿಂದ ಮಹಾತ್ಮ ಗಾಂಧೀಜಿಯವರ 150ನೇ ಜನ್ಮದಿನ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ 114ನೇ ಜನ್ಮದಿನದ ಅಂಗವಾಗಿ ವಿಜಯಪುರದ ಕೇಂದ್ರೀಯ ಬಸ್ ನಿಲ್ದಾಣ ಹಾಗೂ ಮುಲ್ಕ್ ಮೈದಾನದ ಥೋಪ್ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಗಾಂಧೀಜಿ 150ನೇ ಜನ್ಮದಿನ ಹಿನ್ನೆಲೆ ಬಿಎಲ್‍ಡಿಇ ಡೀಮ್ಡ್ ವಿಶ್ವವಿದ್ಯಾಲಯ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಈ ವೇಳೆ ಮಾತನಾಡಿದ ಉಪ ಕುಲಪತಿ ಡಾ. ಎಂ.ಎಸ್.ಬಿರಾದಾರ, ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪಾಲಿಸಲು ವಿದ್ಯಾರ್ಥಿಗಳು ಕನಿಷ್ಠ ಕ್ರಮಗಳನ್ನಾದರೂ ಕೈಗೊಳ್ಳಬೇಕು ಹಾಗೂ ನಮ್ಮ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಎಲ್ಲರೂ ಮುಂದಾಗಬೇಕು ಎಂಬ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ವೈದ್ಯಕೀಯ ಅಧೀಕ್ಷಕ ಡಾ. ವಿಜಯಕುಮಾರ್ ಕಲ್ಯಾಣಪ್ಪಗೋಳ, ಪ್ರಾಧ್ಯಾಪಕರು ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ABOUT THE AUTHOR

...view details