ಕರ್ನಾಟಕ

karnataka

ETV Bharat / state

ವಿಜಯಪುರದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶವಿಲ್ಲ: ಜಿಲ್ಲಾಧಿಕಾರಿ - Ganesha festival is banned in the vijayapur district

ಕೊರೊನಾ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಈ ಬಾರಿ ಸಾರ್ವಜನಿಕ ಗಣೇಶೋತ್ಸವ ರದ್ದು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ​ಕುಮಾರ ತಿಳಿಸಿದರು.

Ganesha festival is banned
ಸಾರ್ವಜನಿಕ ಗಣೇಶೋತ್ಸವ ನಿಷೇಧ

By

Published : Aug 7, 2020, 5:44 PM IST

ವಿಜಯಪುರ: ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿ ಈ ಬಾರಿ ಸಾರ್ವಜನಿಕ ಗಣೇಶೋತ್ಸವವನ್ನು ರದ್ದುಪಡಿಸಲಾಗಿದೆ.

ಇದರ ಜೊತೆಗೆ ಜನರು ತಮ್ಮ ಮನೆಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಯ ಎತ್ತರವನ್ನೂ ಸಹ ಜಿಲ್ಲಾಡಳಿತ ನಿರ್ಧರಿಸಲಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್​ ಕುಮಾರ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ ಮಾತನಾಡಿದರು.

ಗಣೇಶ ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಒಂದೆಡೆ ಸೇರುವ ಕಾರಣ ಸಾಮಾಜಿಕ ಅಂತರ ಕಾಪಾಡಲು ಆಗುವುದಿಲ್ಲ. ಇದರಿಂದಾಗಿ ಸೋಂಕು ಹೆಚ್ಚು ಪಸರಿಸುವ ಸಾಧ್ಯತೆ ಇದೆ. ಆದ್ದರಿಂದ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ ಎಂದರು.

ಭಕ್ತರು ಜಿಲ್ಲಾಡಳಿತ ನಿರ್ಮಿಸಿದ ಹೊಂಡಗಳಲ್ಲಿಯೇ ಮೂರ್ತಿ ವಿಸರ್ಜನೆ ಮಾಡಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಸಾಂಕೇತಿಕವಾಗಿಯೂ ಉತ್ಸವ ಆಚರಿಸುವ ಹಾಗಿಲ್ಲ ಎಂದು ತಿಳಿಸಿದರು.

ಪ್ಲಾಸ್ಟರ್ ಆಫ್​ ಪ್ಯಾರಿಸ್ ಗಣೇಶ ಮೂರ್ತಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಕುರಿತು ಸಭೆ ಮಾಡಿ, ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ABOUT THE AUTHOR

...view details