ವಿಜಯಪುರ: ವಿದ್ಯುತ್ ತಂತಿ ಸ್ಪರ್ಶಿಸಿ ಕುರಿಗಾಹಿ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ತೆನ್ನಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಭಾಗ್ಯಶ್ರೀ ಲಾಯಪ್ಪ ಹೂವಣ್ಣನವರ (5) ಮೃತ ಬಾಲಕಿ. ತೆನ್ನಿಹಳ್ಳಿ ಗ್ರಾಮದ ಬಳಿ ಕುರಿ ಮೇಯಿಸಲು ಹೋದಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಲಿ ಸಾವಿಗೀಡಾಗಿದ್ದಾಳೆ ಎನ್ನಲಾಗಿದೆ. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವಿಜಯಪುರ: ವಿದ್ಯುತ್ ತಂತಿ ಸ್ಪರ್ಶಿಸಿ ಕುರಿಗಾಹಿ ಬಾಲಕಿ ಸಾವು - ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ
ವಿದ್ಯುತ್ ತಂತಿ ಸ್ಪರ್ಶಿಸಿ ಕುರಿಗಾಹಿ ಬಾಲಕಿ ಸಾವನ್ನಪ್ಪಿದರೆ, ಕೌಟುಂಬಿಕ ಸಮಸ್ಯೆಯಿಂದ ಮನನೊಂದು ಮಹಿಳೆಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
![ವಿಜಯಪುರ: ವಿದ್ಯುತ್ ತಂತಿ ಸ್ಪರ್ಶಿಸಿ ಕುರಿಗಾಹಿ ಬಾಲಕಿ ಸಾವು vijaypur](https://etvbharatimages.akamaized.net/etvbharat/prod-images/768-512-16339841-thumbnail-3x2-new.jpg)
ವಿದ್ಯುತ್ ತಂತಿ ಸ್ಪರ್ಶಿಸಿ ಕುರಿಗಾಹಿ ಬಾಲಕಿ ಸಾವು
ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ:ಕುಟುಂಬ ಸಮಸ್ಯೆಯಿಂದ ಮಾನಸಿಕವಾಗಿ ಮನನೊಂದು ಮಹಿಳೆಯೊಬ್ಬಳು ಮನೆಯಲ್ಲಿ ನೇಣು ಬಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ವಿಜಯಪುರದ ಜಲನಗರದಲ್ಲಿ ನಡೆದಿದೆ. ಗಂಗಾ ನರ್ಸರೆಡ್ಡಿ(35) ಆತ್ಮಹತ್ಯೆಗೆ ಶರಣಾದ ಮಹಿಳೆ. ಸ್ಥಳಕ್ಕೆ ಜಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ:ಜೀನ್ಸ್ ಪ್ಯಾಂಟ್, ಒಳ ಉಡುಪು, ಶೂ, ಗುದನಾಳದಲ್ಲಿ ಬಚ್ಚಿಟ್ಟು ಚಿನ್ನ ಸಾಗಾಟ ಪತ್ತೆ