ವಿಜಯಪುರ: ಕಳೆದ ಎರಡು ತಿಂಗಳುಗಳಿಂದ ಬಂದ್ ಆಗಿದ್ದ ವಿಶ್ವ ವಿಖ್ಯಾತ ಪ್ರವಾಸಿ ತಾಣ ಗೋಳಗುಮ್ಮಟ ಇಂದಿನಿಂದ ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಪ್ರವಾಸಿಗರು ಗೋಳಗುಮ್ಮಟದತ್ತ ಮುಖ ಮಾಡಿದ್ದಾರೆ.
ಜಿಲ್ಲೆಯಲ್ಲಿ ಹಲವು ಪ್ರವಾಸಿ ತಾಣಗಳಿವೆ. ಈ ಪ್ರವಾಸಿ ತಾಣಗಳನ್ನೇ ನಂಬಿ ಅದೆಷ್ಟೋ ಆಟೋ ಚಾಲಕರು, ಟಾಂಗಾವಾಲಾಗಳು, ಗಾರ್ಡ್ಗಳು ಜೀವನ ನಡೆಸುತ್ತಿದ್ದರು. ಆದರೆ ಕೊರೊನಾ ಮಹಾಮಾರಿ ಇವರ ಬದುಕನ್ನು ಸಂಕಷ್ಟಕ್ಕೆ ಸಿಲುಕಿಸಿತ್ತು. ಈಗ ಮತ್ತೆ ಪ್ರವಾಸಿ ತಾಣಗಳ ವೀಕ್ಷಣೆಗೆ ಅವಕಾಶ ನೀಡಿದ್ದರಿಂದ ಮತ್ತೆ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಮರು ಜೀವ ಬಂದಂತಾಗಿದೆ. ರಾಜ್ಯದ ವಿವಿಧ ಜಿಲ್ಲೆಯ ಪ್ರವಾಸಿಗರು ಆಗಮಿಸುತ್ತಿದ್ದಾರೆ.