ವಿಜಯಪುರ:ಗೂಡ್ಸ್ ರೈಲು ಹಳಿ ತಪ್ಪಿದ ಘಟನೆ ಜಿಲ್ಲೆಯ ಕೊಲ್ಹಾರ ಪಟ್ಟಣದ ಮುಳವಾಡ ರೈಲು ನಿಲ್ದಾಣದ ಬಳಿ ಸಂಭವಿಸಿದೆ. ಆರು ಬೋಗಿಗಳು ಹಳಿತಪ್ಪಿ ಬಿದ್ದು ಜಖಂ ಆಗಿವೆ.
ಚಲಿಸುತ್ತಿದ್ದ ವೇಳೆ ಏಕಾಏಕಿ ರೈಲಿನ ಆರು ಬೋಗಿಗಳು ಕಟ್ ಆಗಿವೆ. ಅದೃಷ್ಟವಶಾತ್ ಹೆಚ್ಚಿನ ಹಾನಿ ಸಂಭವಿಸಿಲ್ಲ. ವಿಜಯಪುರ ರೈಲ್ವೆ ಪೊಲೀಸರು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.