ಕರ್ನಾಟಕ

karnataka

ETV Bharat / state

ಗೋಂಧಳಿ ಸಮುದಾಯಕ್ಕೆ ಸರ್ಕಾರಿ ಸೌಲಭ್ಯ: ಡಿಸಿ ಕಚೇರಿ ಮುಂದೆ ಪ್ರತಿಭಟನೆ - ಡಿಸಿ ಕಚೇರಿ ಮುಂದೆ ಪ್ರತಿಭಟನೆ

ಗೋಂಧಳಿ ಸಮುದಾಯಕ್ಕೆ ಸರ್ಕಾರಿ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಯಿತು.

ಗೋಂಧಳಿ ಸಮುದಾಯಕ್ಕೆ ಸರ್ಕಾರಿ ಸೌಲಭ್ಯ

By

Published : Nov 6, 2019, 5:39 PM IST

ವಿಜಯಪುರ: ಗೋಂಧಳಿ ಸಮುದಾಯಕ್ಕೆಸರ್ಕಾರಿ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಯಿತು.

ಗೋಂಧಳಿ ಸಮುದಾಯಕ್ಕೆ ಸರ್ಕಾರಿ ಸೌಲಭ್ಯ

ಜಿಲ್ಲೆಯಲ್ಲಿ ಸುಮಾರು 80 ಸಾವಿರಕ್ಕೂ ಅಧಿಕ ಗೋಂಧಳಿ ಸಮುದಾಯ ಜನರಿದ್ದಾರೆ‌. ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ಗೋಂಧಳಿ ಸಮುದಾಯಕ್ಕೆ ಸರ್ಕಾರದ ಯೋಜನೆಗಳು ದೊರೆಯುತ್ತಿಲ್ಲ. ಗೋಂಧಳಿ ಜನಾಂಗಕ್ಕೆ ಸರ್ಕಾರ ಇಲ್ಲಿವರಿಗೂ ಯಾವುದೇ ಸೌಲಭ್ಯಗಳನ್ನು ಕಲ್ಪಿಸಲು ಮುಂದಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಕೂಡಲೆ ಗೋಂಧಳಿ ಸಮುದಾಯಕ್ಕೆ ಹಿಂದುಳಿದ ಕಲ್ಯಾಣ ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯ ಒದಗಿಸಬೇಕು. ಮಕ್ಕಳಿಗೆ ಉಚಿತ ಶಿಕ್ಷಣ, ಸಮುದಾಯ ಜನರಿಗೆ ಶಾಶ್ವತ ಸೂರು, ಮತ್ತು ಉದ್ಯೋಗ ಒದಗಿಸುವಂತೆ ಕೋರಿ ಗೋಂಧಳಿ ಸಮುದಾಯದ ಜನರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರು. ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ ತಮ್ಮ ಬೇಡಿಕೆಗಳನ್ನು ಶೀಘ್ರ ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಲ್ಪಿಸುವುದಾಗಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.

ABOUT THE AUTHOR

...view details