ವಿಜಯಪುರ:ವಿಶ್ವಗುರು ಬಸವಣ್ಣನವರ ಜಯಂತಿ, ರಾಷ್ಟ್ರೀಯ ಉತ್ಸವವನ್ನು ಅವರ ಹುಟ್ಟೂರಾದ ಬಸವನ ಬಾಗೇವಾಡಿಯಲ್ಲೇ ಆಚರಿಸಿ ಅನ್ನೋದು ಬಹುದಿನಗಳ ಬೇಡಿಕೆಯಾಗಿತ್ತು. ಪ್ರತಿ ವರ್ಷ ರಾಜ್ಯ ಸರ್ಕಾರದಿಂದ ಬಸವ ಜಯಂತಿಯನ್ನು ಬೆಂಗಳೂರಿನಲ್ಲಿ ಆಚರಿಸಿಕೊಂಡು ಬರಲಾಗ್ತಿತ್ತು. ಆದ್ರೆ ಪ್ರಸಕ್ತ ವರ್ಷದಿಂದ ಬಸವನ ಬಾಗೇವಾಡಿಯಲ್ಲಿ ಬಸವ ಜಯಂತಿ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬಸವನ ಬಾಗೇವಾಡಿಯಲ್ಲೇ ಬಸವ ಜಯಂತಿ ಆಚರಣೆಗೆ ಸರ್ಕಾರದ ಆದೇಶ
ಪ್ರಸಕ್ತ ವರ್ಷದಿಂದ ಬಸವನ ಬಾಗೇವಾಡಿಯಲ್ಲಿ ಬಸವ ಜಯಂತಿ ಆಚರಣೆ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇ 3ರಂದು ಬಸವ ಜಯಂತಿಯನ್ನು ರಾಜ್ಯ ಸರ್ಕಾರದಿಂದ ಆಚರಿಸಲಾಗುತ್ತದೆ.
ಬಸವ ಜಯಂತಿ ಆಚರಣೆ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ಕುರಿತು ಆದೇಶ ಹೊರಡಿಸಿದೆ. ಮೇ 3ರಂದು ಬಸವ ಜಯಂತಿಯನ್ನು ರಾಜ್ಯ ಸರ್ಕಾರದಿಂದ ಆಚರಿಸಲಾಗುತ್ತದೆ. ಇದು ಬಸವಾಭಿಮಾನಿಗಳಲ್ಲಿ ಸಂತಸ ತಂದಿದೆ. ವಿಜಯಪುರ ಸಂಸದ ರಮೇಶ್ ಜಿಗಜಿಣಗಿ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಈ ಹಿಂದೆ ಬಸವನ ಬಾಗೇವಾಡಿಯ ಮಠಾಧೀಶರು, ಹೋರಾಟಗಾರರು ಜಯಂತಿ ಆಚರಣೆ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದರು.
ಇದನ್ನೂ ಓದಿ:ಧಾರ್ಮಿಕ ಗ್ರಂಥಗಳಿಗೆ ಭಗವದ್ಗೀತೆ ಹೋಲಿಕೆಯೇ ತಪ್ಪು: ಸಚಿವ ನಾಗೇಶ್