ಮುದ್ದೇಬಿಹಾಳ (ವಿಜಯಪುರ): ಸರ್ಕಾರಿ ಶಾಲೆಯ ಛಾವಣಿ ಕುಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಈ ಘಟನೆ ತಾಲೂಕಿನ ಗೆದ್ದಲಮರಿ ಗ್ರಾಮದಲ್ಲಿ ಶುಕ್ರವಾರ ನಡೆಯಿತು. ಎರಡನೇ ಮತ್ತು ಒಂದನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ವಿದ್ಯಾರ್ಥಿಗಳ ತಲೆ ಮೇಲೆ ಛಾವಣಿ ಬಿದ್ದಿದ್ದು, ರಕ್ತಸ್ರಾವವಾಗಿದೆ. ಕೂಡಲೇ ಶಾಲೆಯ ಮುಖ್ಯೋಪಾಧ್ಯಾಯ ಎಸ್.ಎಂ.ಜೋಗಿನ್ ಪಾಲಕರಿಗೆ ವಿಷಯ ತಿಳಿಸಿ, ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆ ತಂದಿದ್ದಾರೆ.