ವಿಜಯಪುರ:ಕೇಂದ್ರ ಸರ್ಕಾರದ ಅಸಂಘಟಿತ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಜಿಲ್ಲಾ ಅಸಂಘಟಿತ ಕಾರ್ಮಿಕರು ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಅಸಂಘಟಿತ ಕಾರ್ಮಿಕರಿಗೆ ಕೇಂದ್ರ ಸರ್ಕಾರ ಸಾಮಾಜಿಕ ಭದ್ರತೆಗಳನ್ನು ಒದಗಿಸಿಲ್ಲ, ದೇಶದ ಆರ್ಥಿಕತೆ ನಿಧಾನಗತಿಯಲ್ಲಿದೆ. ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ, ಬೆಲೆ ಏರಿಕೆಯಿಂದ ಅಸಂಘಟಿತ ಕಾರ್ಮಿಕರು ಪರದಾಡುವಂತಾಗಿದೆ. ಆದ್ರೆ ಸರ್ಕಾರ ಮಾತ್ರ ಆರ್ಥಿಕ ನೀತಿ ಹತೋಟಿಗೆ ತರುವ ಯೋಜನೆಗಳನ್ನು ರೂಪಿಸುತ್ತಿಲ್ಲ. 15 ಕಾರ್ಮಿಕ ಕಲ್ಯಾಣ ಕಾನೂನುಗಳನ್ನು ವಿಲೀನಗೊಳಿಸುವ ಸಾಮಾಜಿಕ ಭದ್ರತಾ ಸಂಹಿತೆಯನ್ನು ಬಿಟ್ಟು ಬಿಜೆಪಿ ಆಡಳಿತ ಮಾಡುತ್ತಿದೆದೇಶದ 40 ಕೋಟಿ ಅಜ್ಞಾತ ಕಾರ್ಮಿಕರಿಗೆ ಕೇಂದ್ರ ಸರ್ಕಾರ ಯಾವುದೇ ಕೊಡುಗೆ ನೀಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಎಲ್ಲಾ ಕಾರ್ಮಿಕರನ್ನು ಇಎಫ್ ಇಎಸ್‌ಐ ಯೋಜನೆಯೊಳಗಡೆ ತರಬೇಕು. ದೇಶದ 40 ಕೋಟಿ ಅಸಂಘಟಿತ ಕಾರ್ಮಿಕರಿಗೆ ತಕ್ಷಣವೇ ಕೇಂದ್ರ ಸರ್ಕಾರ ಸಾಮಾಜಿಕ ಭದ್ರತೆ ಒದಗಿಸಬೇಕೇಂದು ವಿಜಯಪುರ ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಿದರು.
ಅಸಂಘಟಿತ ಕಾರ್ಮಿಕರ ಪ್ರತಿಭಟನೆ ಇನ್ನೊಂದೆಡೆಅಂಗವಿಕಲರಿಗೆ ಸರ್ಕಾರಿ ಸೌಲಭ್ಯಗಳನ್ನು ಒದಗಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗವಿಕಲ ಹಾಗೂ ಪಾಲಕರ ಒಕ್ಕೂಟ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಿದರು. ಸರ್ಕಾರ ಅಂಗವಿಕಲರಿಗೆ ಯಾವುದೇ ಉದ್ಯೋಗ ಭರವಸೆ ಹಾಗೂ ಸಾಮಾಜಿಕ ಭದ್ರತೆ ಹೆಚ್ಚಿಸಲು ಕ್ರಮಗಳನ್ನು ಕೈಗೊಂಡಿಲ್ಲ. ಇನ್ನೂ ಸಮಾಜದಲ್ಲಿ ಅಂಗವಿಕಲರಿಗೆ ಶೋಷಣೆಗಳು ದಿನೇ ದಿನೇ ಹೆಚ್ಚುತ್ತಿವೆ. ಸರ್ಕಾರ ಮಾತ್ರ ಅಂಗವಿಕಲರ ರಕ್ಷಣೆಗೆ ಮುಂದಾಗಿಲ್ಲ. ವಿಕಲಾಂಗ ವ್ಯಕಿಗಳ ಕಾಯ್ದೆ ಜಾರಿಯಾಗಿ ಮೂರು ವರ್ಷಗಳು ಕಳೆದರೂ ಈವರೆಗೂ ಯೋಜನೆಗಳು ಅಂಗವಿಕರಿಗೆ ಹಂಚಿಕೆಯಾಗಿಲ್ಲ ಎಂದು ಪ್ರತಿಭಟನಾನಿರತ ಅಂಗವಿಕಲರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಶೇ.75 ಅಂಗವಿಕಲತೆ ಹೊಂದಿರುವ ಅಂಗವೈಕಲ್ಯರಿಗೆ 5 ಸಾವಿರ ರೂ. ಪಿಂಚಣಿ ಸೌಲಭ್ಯ ಹಾಗೂ ಅಂಗವಿಕಲರಿಗೆ ಮನೆ, ಮಕ್ಕಳಿಗೆ ಶಿಕ್ಷಣ ಸೌಲಭ್ಯ ಒದಗಿಸುವಂತೆ ಆರ್‌ಪಿಡಿ ಕಾಯ್ದೆ ಪ್ರಕಾರ ಮೀಸಲಾತಿ ಒದಗಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು..