ವಿಜಯಪುರ:ಮುಂದಿನ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆಗಳಿರುವ ಕಾರಣ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ವಿಜಯಪುರದಲ್ಲಿ ಭಾರಿ ಮಳೆ ಸಾಧ್ಯತೆ: ರೆಡ್ ಅಲರ್ಟ್ ಘೋಷಿಸಿದ ಜಿಲ್ಲಾಧಿಕಾರಿ ಅಕ್ಟೋಬರ್ 13 ಮತ್ತು 14ರಂದು ಭಾರೀ ಮಳೆಯಾಗುವ ಸಾಧ್ಯತೆಗಳಿರುವ ಕಾರಣ ಜಿಲ್ಲಾ ಮಟ್ಟದ ಅಧಿಕಾರಿ ಕೇಂದ್ರ ಸ್ಥಾನದಲ್ಲಿರಲು ಸೂಚನೆ ನೀಡಿದ್ದಾರೆ. ಅ.15 ರಂದು ಯಲ್ಲೋ ಅಲರ್ಟ್ ಹಾಗೂ ಅ.16, 17ರಂದು ಗ್ರೀನ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಪ್ರವಾಹ ಪರಿಸ್ಥಿತಿ ಎದುರಿಸಲು ಸಿದ್ಧತೆ:ಮುಂದಿನ ನಾಲ್ಕು ದಿನ ಜಿಲ್ಲೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆಯಾಗುವ ಕಾರಣ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ದರಾಗಿರಬೇಕು. ಜೊತೆಗೆ ಅಗತ್ಯ ರಕ್ಷಣಾ ಸಾಮಗ್ರಿಗಳ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ಇನ್ನು, ಎಸಿ ಹಾಗೂ ತಹಸೀಲ್ದಾರ್ ಕಚೇರಿಯಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಗಳಾದಲ್ಲಿ ಕೂಡಲೇ ಟೋಲ್ ಫ್ರೀ ನಂ: 1077 (08352-221261) ಕರೆ ಮಾಡಬಹುದಾಗಿದೆ.