ಕರ್ನಾಟಕ

karnataka

ETV Bharat / state

ಮುದ್ದೇಬಿಹಾಳದಲ್ಲಿ ಭಾರಿ ಮಳೆ ಅಂಗಡಿ, ಮನೆಗಳಿಗೆ ನುಗ್ಗಿದ ನೀರು - ಈಟಿವಿ ಭಾರತ್​ ಕನ್ನಡ

ಮುದ್ದೇಬಿಹಾಳ ತಾಲೂಕಿನಲ್ಲಿ ಎರಡು ಗಂಟೆಗಳ ಭಾರಿ ಮಳೆ ಸುರಿದು ಮನೆಗಳಿಗೆ ಚರಂಡಿ ನೀರು ನುಗ್ಗಿದೆ.

KN_MUDDEBIHAL_HAVY RAIN_3_1_KAC10030
ಅಂಗಡಿ, ಮನೆಗಳಿಗೆ ನುಗ್ಗಿದ ನೀರು

By

Published : Aug 3, 2022, 10:57 PM IST

ಮುದ್ದೇಬಿಹಾಳ: ತಾಲೂಕಿನಲ್ಲಿ ಇಂದು ಸುರಿದ ಜೋರು ಮಳೆಯಿಂದ ಕಿರಾಣಿ ಅಂಗಡಿ, ಸ್ಟೇಷನರಿ ಸೇರಿದಂತೆ ಗೊಬ್ಬರದ ಅಂಗಡಿಗಳಿಗೆ ಮಳೆ ನೀರು ನುಗ್ಗಿದ್ದು, ವಸ್ತುಗಳಿಗೆ ಹಾನಿಯಾಗಿದೆ. ಅಂಬೇಡ್ಕರ್ ವೃತ್ತದಲ್ಲಿ ನೀರಿನೊಂದಿಗೆ ಮರದ ದಿಮ್ಮಿಗಳು ಬಂದು ವಾಹನ ಸಂಚಾರ ಸ್ಥಗಿತಗೊಂಡಿತು. ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಪಟ್ಟಣದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ ಎಂದು ಸಾರ್ವಜನಿಕರು ದೂರಿದರು. ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ತಮ್ಮ ಕಾರ್ಯಕರ್ತರೊಂದಿಗೆ ಮಳೆ ನೀರು ನುಗ್ಗಿರುವ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಅಂಗಡಿಗಳಿಗೆ ನೀರು ನುಗ್ಗಿರುವುದನ್ನು ಪರಿಶೀಲಿಸಿ ಗ್ರಾಮ ಲೆಕ್ಕಾಧಿಕಾರಿಗಳಿಂದ ಹಾನಿಯಾಗಿರುವ ಅಂಗಡಿಗಳ ಮಾಹಿತಿ ಪಡೆದರು.

ಅಂಗಡಿ, ಮನೆಗಳಿಗೆ ನುಗ್ಗಿದ ನೀರು

ABOUT THE AUTHOR

...view details