ಕರ್ನಾಟಕ

karnataka

ವಿಜಯಪುರದಲ್ಲಿ ಧಾರಕಾರ ಮಳೆ ; ರಸ್ತೆ ಮೇಲೆ ಹರಿದ ಚರಂಡಿ ನೀರು...!!

By

Published : Sep 10, 2020, 3:32 PM IST

ವಿಜಯಪುರ ನಗರದಲ್ಲಿ ಧಾರಕಾರ ಮಳೆಯಾಗಿದ್ದು ರಸ್ತೆಯ ಗುಂಡಿಗಳು ನೀರಿನಿಂದ ತುಂಬಿಕೊಂಡಿರುವ ಪರಿಣಾಮ ಸಾಕಷ್ಟು ಅನಾಹುತಗಳು ಸಂಭವಿಸುತ್ತಿವೆ.

heavy-rainfall-at-vijayapura
ಗಿಡ ನೆಟ್ಟು ವಿನೂತನವಾಗಿ ಪ್ರತಿಭಟನೆ

ವಿಜಯಪುರ: ನಗರದಲ್ಲಿ ಧಾರಕಾರ ಮಳೆಯಾಗಿದ್ದು ವಾರ್ಡ್ ನಂ 15ರ ಕಾವಿ ಫ್ಲಾಟ್​ ಪ್ರದೇಶದಲ್ಲಿ ಚರಂಡಿ ನೀರು ತುಂಬಿ ರಸ್ತೆಗೆ ನುಗ್ಗಿದ ಪರಿಣಾಮ ಇಡೀ ಪ್ರದೇಶದಲ್ಲಿ ಸಂಚಾರ ಸ್ಥಗಿತವಾಗಿದೆ.

ವಿಜಯಪುರದಲ್ಲಿ ಧಾರಕಾರ ಮಳೆ

ಇದೇ ರೀತಿ ಜಮಖಂಡಿ ರಸ್ತೆಯ ಗುಂಡಿಗಳು ನೀರಿನಿಂದ ತುಂಬಿಕೊಂಡಿದ್ದು, ಪರಿಣಾಮ ಬೈಕ್ ಸವಾರನೊಬ್ಬ ಬಿದ್ದು ಗಾಯಗೊಂಡಿದ್ದಾನೆ. ಪರಿಣಾಮ ಅಪಘಾತ ತಪ್ಪಿಸುವ ನಿಟ್ಟಿನಲ್ಲಿ ಯುವಕರು ರಸ್ತೆಯಲ್ಲಿ ಗಿಡ ನೆಟ್ಟು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಹದಗೆಟ್ಟ ರಸ್ತೆಗಳನ್ನು ದುರಸ್ತಿ ಮಾಡಿಸುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ್ದಾರೆ.

ABOUT THE AUTHOR

...view details