ವಿಜಯಪುರ: ಕಳೆದೊಂದು ವಾರದಿಂದ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೆಕ್ಕೆಜೋಳ, ಸಜ್ಜೆ ಮುಂತಾದ ಬೆಳೆಗಳು ನೀರಿನಿಂದ ಹಾನಿಯಾಗಿವೆ.
ವಿಜಯಪುರದಲ್ಲಿ ಧಾರಾಕಾರ ಮಳೆ: ಅಪಾರ ಪ್ರಮಾಣದ ಬೆಳೆ ನಾಶ - ಮಳೆಯಿಂದ ಬೆಳೆ ಹಾನಿ
ವಿಜಯಪುರ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಬೆಳೆಗಳು ಸಂಪೂರ್ಣ ನಾಶವಾಗಿವೆ. ಈ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರ ಕಲ್ಪಿಸುವಂತೆ ರೈತರು ಮನವಿ ಮಾಡಿದ್ದಾರೆ.
ಬೆಳೆಗಳು ಸಂಪೂರ್ಣ ನಾಶ
ವಿಜಯಪುರ ತಾಲೂಕಿನ ಕವಲಗಿ, ಕಗ್ಗೋಡ, ಕುಮಟಗಿ ಸುತ್ತಮುತ್ತ ಬೆಳೆ ಹಾನಿಯಾಗಿದೆ. ಅಪಾರ ಪ್ರಮಾಣದ ಮೆಕ್ಕೆಜೋಳ ಬೆಳೆ ಸಂಪೂರ್ಣ ನಾಶವಾಗಿದೆ.
ಸದ್ಯ ಅನ್ನದಾತ ಕಂಗಾಲಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಇನ್ನು ಸೂಕ್ತ ಪರಿಹಾರ ಒದಗಿಸುವಂತೆ ರೈತರು ಮನವಿ ಮಾಡಿದ್ದಾರೆ.