ಕರ್ನಾಟಕ

karnataka

By

Published : Jul 28, 2020, 8:36 PM IST

ETV Bharat / state

ರ‍್ಯಾಪಿಡ್ ಆ್ಯಂಟಿಜನ್ ಪರೀಕ್ಷೆಗೆ ಹೆಚ್ಚು ಆದ್ಯತೆ: ಜಿಲ್ಲಾಧಿಕಾರಿ ವೈ.ಎಸ್​.ಪಾಟೀಲ

ಸರ್ಕಾರದ ನಿರ್ದೇಶನದಂತೆ ಹೆಚ್ಚಿನ ರ‍್ಯಾಪಿಡ್ ಆ್ಯಂಟಿಜನ್ ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಅದಕ್ಕಾಗಿ ಹೆಚ್ಚು ಆದ್ಯತೆ ನೀಡುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ವೈ.ಎಸ್​.ಪಾಟೀಲ ಅವರು ಹೇಳಿದರು.

District collector Y.S.Patil
ಜಿಲ್ಲಾಧಿಕಾರಿ ವೈ.ಎಸ್​.ಪಾಟೀಲ

ವಿಜಯಪುರ: ಸರ್ಕಾರದ ನಿರ್ದೇಶನದಂತೆ ಹೆಚ್ಚಿನ ರ‍್ಯಾಪಿಡ್ ಆ್ಯಂಟಿಜನ್ ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಲಕ್ಷಣಗಳುಳ್ಳವರಿಗೆ ಈ ಟೆಸ್ಟ್​​​ನಲ್ಲಿ ನೆಗೆಟಿವ್ ವರದಿ ಬಂದಲ್ಲಿ ಆರ್​ಟಿಪಿಸಿಆರ್​​ ಮೂಲಕ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ವೈ.ಎಸ್​.ಪಾಟೀಲ

ಈ ನಿಟ್ಟಿನಲ್ಲಿ ಈಗಾಗಲೇ ಎಲ್ಲಾ ತಾಲೂಕು ಹಾಗೂ ನಗರಗಳಿಗೆ ಗುರಿ ನಿಗದಿಪಡಿಸಲಾಗಿದೆ. ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಅದರಂತೆ ನಿನ್ನೆಯವರೆಗೆ ಸುಮಾರು 2,000 ಟೆಸ್ಟ್ ಮಾಡಲಾಗಿದೆ. ಅದರಲ್ಲಿ ಸುಮಾರು ಶೇ.7-12ರಷ್ಟು ಪ್ರಮಾಣದಲ್ಲಿ ಬೇರೆ ಬೇರೆ ಪ್ರದೇಶಗಳಲ್ಲಿ ಬೇರೆ ಪ್ರಕರಣಗಳು ಕಂಡುಬರುತ್ತಿವೆ. ಈ ರ್ಯಾಪಿಡ್ ಆ್ಯಂಟಿಜನ್ ಪರೀಕ್ಷೆಯನ್ನು ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮುಂದುವರೆಸುವಂತೆ ಸೂಚಿಸಲಾಗಿದೆ. ಅದಕ್ಕಾಗಿ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ABOUT THE AUTHOR

...view details