ಕರ್ನಾಟಕ

karnataka

ETV Bharat / state

ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಹಾಸ್ಟೆಲ್, ವಸತಿ ಶಾಲಾ ಗುತ್ತಿಗೆ ನೌಕರರ ಪ್ರತಿಭಟನೆ

ಸರ್ಕಾರಿ ವಸತಿ ನಿಲಯಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ನೌಕಕರ ಬಾಕಿ ವೇತನ ಪಾವತಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಗುತ್ತಿಗೆ ನೌಕರರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Hostel staff Protest for giving pending salary
ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಹಾಸ್ಟೆಲ್, ವಸತಿ ಶಾಲಾ ಗುತ್ತಿಗೆ ನೌಕರರ ಪ್ರತಿಭಟನೆ

By

Published : Jul 14, 2020, 4:43 PM IST

ವಿಜಯಪುರ: ಸರ್ಕಾರಿ ವಸತಿ ನಿಲಯಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ನೌಕಕರ ಬಾಕಿ ವೇತನ ಪಾವತಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಗುತ್ತಿಗೆ ನೌಕರರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಛೇರಿ ಮುಂಭಾದಗಲ್ಲಿ ಹಾಸ್ಟೆಲ್ ಹೊರ ಗುತ್ತಿಗೆಗೆ ನೌಕಕರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಸರ್ಕಾರ ಕಳೆದ ಮೂರ್ನಾಲ್ಕು ತಿಂಗಳಿಂದ ವಸತಿ ನಿಲಯಗಳಲ್ಲಿ ಕಡಿಮೆ ಸಂಬಳದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದೆ. ಸಕಾಲಕ್ಕೆ ವೇತನ ಪಾವತಿಸಿಲ್ಲ ಇನ್ನೂ ಮೂರು ತಿಂಗಳ ವೇತನ ಬಾಕಿ ಉಳಿಸಿಕೊಂಡ ಪರಿಣಾಮ ಹೊರಗುತ್ತಿಗೆ ಕಾರ್ಮಿಕರು ಆರ್ಥಿಕ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಕಿಡಿಕಾರಿದರು‌.

ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಹಾಸ್ಟೆಲ್, ವಸತಿ ಶಾಲಾ ಗುತ್ತಿಗೆ ನೌಕರರ ಪ್ರತಿಭಟನೆ

ಇಎಸ್‌ಐಪಿಎಫ್ ಅನ್ನು ಎಲ್ಲ ನೌಕರಿಗೂ ವಿಸ್ತರಣೆ ಮಾಡಬೇಕು. ಹೊರಗುತ್ತಿಗೆ ಆಧಾರಿತವಾಗಿ ದುಡಿಯುತ್ತಿರುವ ನೌಕರರಿಗೆ ಏಜನ್ಸಿಗಳಿಂದ ವೇತನ ಕೊಡಸಬೇಕು‌‌. ಇತ್ತ ಖಾಯಂ ನೌಕರರ ವರ್ಗಾವಣೆ ಆರಂಭವಾಗಿದ್ದೂ ಗುತ್ತಿಗೆ ಆಧಾರಿತವಾಗಿ ದುಡಿಯುತ್ತಿರುವ ಹಾಸ್ಟಲ್‌ ನೌಕರರ ಸ್ಥಳಕ್ಕೆ ಬೇರೆಯವರನ್ನು ವರ್ಗಾಯಿಸದಂತೆ ಪ್ರತಿಭಟನಾಕಾರರು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ABOUT THE AUTHOR

...view details