ಕರ್ನಾಟಕ

karnataka

ETV Bharat / state

ವಸತಿ ನಿಲಯದ ಅಡುಗೆ ಸಹಾಯಕಿ ಸಾವು: ಅಧಿಕಾರಿಯನ್ನು ವಜಾ ಮಾಡಲು ಆಗ್ರಹ - Vijayapura BCM hostel news

ವಿಜಯಪುರ ನಗರದ ಬಿಸಿಎಂ ವಸತಿ ನಿಲಯದಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಮಹಿಳೆ ಆತ್ಮಹತ್ಯೆಗೆ ಶರಣಾಗಿರೆ. ಇದಕ್ಕೆ ತಾಲೂಕು ಕಲ್ಯಾಣಾಧಿಕಾರಿ ಕಾರಣವಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಹಾಸ್ಟೆಲ್ ಹಾಗೂ ವಸತಿ ಶಾಲಾ ಹೊರ ಗುತ್ತಿಗೆ ನೌಕಕರ ಸಂಘಟನೆ ಕಾರ್ಯಕರ್ತರು ಆರೋಪಿಸಿದ್ದಾರೆ.

ಕರ್ನಾಟಕ ರಾಜ್ಯ ಹಾಸ್ಟೆಲ್ ಹಾಗೂ ವಸತಿ ಶಾಲಾ ಹೊರಗುತ್ತಿಗೆ ನೌಕಕರ ಸಂಘಟನೆ ಪ್ರತಿಭಟನೆ
ಕರ್ನಾಟಕ ರಾಜ್ಯ ಹಾಸ್ಟೆಲ್ ಹಾಗೂ ವಸತಿ ಶಾಲಾ ಹೊರಗುತ್ತಿಗೆ ನೌಕಕರ ಸಂಘಟನೆ ಪ್ರತಿಭಟನೆ

By

Published : Nov 25, 2020, 3:09 PM IST

Updated : Nov 25, 2020, 6:09 PM IST

ವಿಜಯಪುರ: ಮಹಿಳೆ ಸಾವಿಗೆ ಕಾರಣವಾದ ತಾಲೂಕು ಕಲ್ಯಾಣಾಧಿಕಾರಿಯನ್ನು ಕರ್ತವ್ಯದಿಂದ ವಜಾಗೊಳಿಸುವಂತೆ ಕರ್ನಾಟಕ ರಾಜ್ಯ ಹಾಸ್ಟೆಲ್ ಹಾಗೂ ವಸತಿ ಶಾಲಾ ಹೊರಗುತ್ತಿಗೆ ನೌಕಕರ ಸಂಘಟನೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ನಗರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹಾಸ್ಟೆಲ್ ಹೊರ ಗುತ್ತಿಗೆ ನೌಕರರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ, ತಾಲೂಕು ಕಲ್ಯಾಣಾಧಿಕಾರಿ ಕಿರುಕುಳ ನೀಡಿದ ಕಾರಣದಿಂದ ವಸತಿ ನಿಲಯದಲ್ಲಿ ಕೆಲಸ ಮಾಡುತ್ತಿದ್ದ ಬೋರಮ್ಮ ಕಳೆದ ಶನಿವಾರ ಆತ್ಮಹತ್ಯೆ ಶರಣಾಗಿದ್ದಾರೆ‌ ಎಂದು ಆರೋಪಿಸಿದರು.

ಕರ್ನಾಟಕ ರಾಜ್ಯ ಹಾಸ್ಟೆಲ್ ಹಾಗೂ ವಸತಿ ಶಾಲಾ ಹೊರಗುತ್ತಿಗೆ ನೌಕಕರ ಸಂಘಟನೆ ಪ್ರತಿಭಟನೆ

ಕಳೆದ 9 ವರ್ಷಗಳಿಂದ ಬೋರಮ್ಮ ವಿಜಯಪುರ ನಗರದ ಬಿಸಿಎಂ ವಸತಿ ನಿಲಯದಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಬಳಿಕ ಬಾಕಿ ವೇತನ ಹಾಗೂ ಕೆಲಸದ ವಿಚಾರವಾಗಿ ತಾಲೂಕು ಕಲ್ಯಾಣಾಧಿಕಾರಿ ಬಳಿ ಕೇಳಿದಾಗ, ಅಧಿಕಾರಿ ಮಹಿಳೆಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕೂಡಲೇ ಮಹಿಳೆ ಸಾವಿಗೆ ಕಾರಣವಾದ ಅಧಿಕಾರಿಯನ್ನು ಕರ್ತವ್ಯದಿಂದ ಅಮಾನತು ಮಾಡಬೇಕು. ಮೃತ ಬೋರಮ್ಮ ಕುಟುಂಬಸ್ಥರಿಗೆ ಸರ್ಕಾರ ಉದ್ಯೋಗ ನೀಡಿ ನ್ಯಾಯ ಒದಗಿಸುವಂತೆ ಆಗ್ರಹಿಸಿದ್ದಾರೆ.

Last Updated : Nov 25, 2020, 6:09 PM IST

ABOUT THE AUTHOR

...view details