ಕರ್ನಾಟಕ

karnataka

ETV Bharat / state

ರೈಲು ನಿಲ್ದಾಣದಲ್ಲಿ ಸ್ಫೋಟ ಪ್ರಕರಣ: ತನಿಖೆ ಚುರುಕುಗೊಳಿಸಿದ ಪೊಲೀಸ್​​.. ಬಿಗಿ ಭದ್ರತೆಗೆ ರೈಲ್ವೆ ಸಚಿವರ ಹುಕುಂ - ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ​ ಸ್ಫೋಟ ಪ್ರಕರಣ

ಹುಬ್ಬಳ್ಳಿಯ ರೈಲು ನಿಲ್ದಾಣದಲ್ಲಿ ನಡೆದ ಸ್ಫೋಟದ ಕುರಿತು ತನಿಖೆ ಚುರುಕುಗೊಳಿಸಲಾಗಿದೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಕಾರ್ಯಾಚರಣೆ ನಡೆಸುತ್ತಿದ್ದು, ರೈಲು ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಕೇಂದ್ರ ಸಚಿವ ಸುರೇಶ ಅಂಗಡಿ

By

Published : Oct 22, 2019, 4:17 PM IST

ವಿಜಯಪುರ:ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ನಡೆದ ನಿಗೂಢ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಪ್ರಕರಣದ ಆರೋಪಿಗಳು ಯಾರೇ ಆಗಿರಲಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಸುರೇಶ ಅಂಗಡಿ ಹೇಳಿದರು.

ಕೇಂದ್ರ ಸಚಿವ ಸುರೇಶ ಅಂಗಡಿ

ವಿಜಯಪುರ - ಯಶವಂತಪುರ ನೂತನ ರೈಲು ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಎಸ್​ಪಿ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸ್ಫೋಟದ ತನಿಖೆ ನಡೆಸಲಾಗುತ್ತಿದೆ. ಎಲ್ಲರ ಸಲಹೆ, ಸೂಕ್ತ ಮಾರ್ಗ ದರ್ಶನ ತೆಗೆದುಕೊಂಡು ಆರೋಪಿಗಳ ಪತ್ತೆಗೆ ತನಿಖೆ ಚುರುಗೊಳಿಸಲಾಗಿದೆ ಎಂದರು.

ಈಗಾಗಲೇ ಎಲ್ಲ ಅಧಿಕಾರಿಗಳು ಸ್ಥಳದಲ್ಲಿ ಇದ್ದು. ಹುಬ್ಬಳ್ಳಿ ಸ್ಪೋಟ ಪ್ರಕರಣ ಹಿನ್ನೆಲೆಯಲ್ಲಿ ಎಲ್ಲ ರೈಲು ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದರು. ರೈಲು ಖಾಸಗೀಕರಣ ಪ್ರಸ್ತಾಪ ಇಲ್ಲ. ಇದೇ ವೇಳೆ ರೈಲುಗಳನ್ನು ಖಾಸಗೀಕರಣ ಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ಸಚಿವ ಸುರೇಶ ಅಂಗಡಿ ಸ್ಪಷ್ಟಪಡಿಸಿದರು. ದೇಶದ ಎಲ್ಲಡೆ ರೈಲು ಸೇವೆ ಒದಗಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದರು.

ABOUT THE AUTHOR

...view details