ವಿಜಯಪುರ: ಜಿಲ್ಲೆಯಲ್ಲಿ ಗಾಂಜಾ ಮಾರಾಟ ಹಾಗೂ ಬೆಳೆಯುವವರ ಮೇಲೆ ದಾಳಿ ಮುಂದುವರೆದಿದ್ದು, ಇಂಡಿ ತಾಲೂಕಿನ ದೇಗಿನಾಳ ಗ್ರಾಮದ ಜಮೀನೊಂದರಲ್ಲಿ ಅಕ್ರಮವಾಗಿ ಬೆಳೆದಿದ್ದ 750 ಗ್ರಾಂ. ಹಸಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಜಯಪುರ: ಅಕ್ರಮ ಗಾಂಜಾ ಬೆಳೆದಿದ್ದ ವ್ಯಕ್ತಿ ಬಂಧನ - vijaypur latest news
ಅಕ್ರಮವಾಗಿ ಗಾಂಜಾ ಬೆಳೆದಿದ್ದ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ದೇಗಿನಾಳ ಗ್ರಾಮದ ರೇವಣಸಿದ್ದ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
![ವಿಜಯಪುರ: ಅಕ್ರಮ ಗಾಂಜಾ ಬೆಳೆದಿದ್ದ ವ್ಯಕ್ತಿ ಬಂಧನ illegal marijuana crop in vijaypur](https://etvbharatimages.akamaized.net/etvbharat/prod-images/768-512-8828321-568-8828321-1600275758874.jpg)
ಅಕ್ರಮ ಗಾಂಜಾ ಬೆಳೆದಿದ್ದ ವ್ಯಕ್ತಿ ಬಂಧನ
ಈ ಸಂಬಂಧ ಆರೋಪಿ ರೇವಣಸಿದ್ದ ರಾಠೋಡ ಎಂಬಾತನನ್ನು ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಹೊರ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.