ವಿಜಯಪುರ: ಜಿಲ್ಲೆಯಿಂದ ಹೊರರಾಜ್ಯಕ್ಕೆ ಅಕ್ರಮವಾಗಿ ಪಡಿತರ ಅಕ್ಕಿಯನ್ನು ತೆಗೆದುಕೊಂಡು ಹೋಗಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಈಗ ಪೊಲೀಸ್ ಬಲೆಗೆ ಬಿದ್ದಿದೆ.
ಕಾಳಸಂತೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಅನ್ನಭಾಗ್ಯ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಿಲ್ಲೆಯ ಸಿಂದಗಿ ಪಟ್ಟಣದ ಕಲಕೇರಿ ಬೈಪಾಸ್ ಬಳಿ ಪೊಲೀಸರು ಸೀಜ್ ಮಾಡಿದ್ದಾರೆ. ಮಹಾರಾಷ್ಟ್ರ ರಾಜ್ಯದ ನೋಂದಣಿ ಸಂಖ್ಯೆ ಹೊಂದಿದ್ದ ಲಾರಿಯಲ್ಲಿ 502ಅಕ್ಕಿ ಚೀಲಗಳನ್ನು ಸಾಗಿಸಲಾಗ್ತಿತ್ತು. ಈ ವೇಳೆ, 6.57ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿ ವಶಕ್ಕೆ ಪಡೆಯಲಾಗಿದೆ.