ಕರ್ನಾಟಕ

karnataka

ETV Bharat / state

ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ: ಬಾಗೇವಾಡಿ ತಹಶೀಲ್ದಾರ್ ನೇತ್ವತ್ವದಲ್ಲಿ ದಾಳಿ - ಬಸವನ ಬಾಗೇವಾಡಿ ತಾಲೂಕಿನ ಮಸಿಬಿನಾಳ ಗ್ರಾಮದಲ್ಲಿ ಅಕ್ರಮ ಅಕ್ಕಿ ಸಾಗಾಟ

ಬಸವನ ಬಾಗೇವಾಡಿ ತಾಲೂಕಿನ ಮಸಿಬಿನಾಳ ಗ್ರಾಮದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಕ್ವಿಂಟಾಲ್ ಅಕ್ಕಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Illegally ration rice sale in vijayapur
ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ

By

Published : Jun 20, 2020, 3:15 PM IST

ವಿಜಯಪುರ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಟಂಟಂ ವಾಹನದಲ್ಲಿ ಸಾಗಿಸುತ್ತಿದ್ದಾಗ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಬಾಗೇವಾಡಿ ತಹಶೀಲ್ದಾರ್ ನೇತ್ವತ್ವದಲ್ಲಿ ದಾಳಿ ನಡೆಸಿದ್ದಾರೆ.

ಬಸವನ ಬಾಗೇವಾಡಿ ತಾಲೂಕಿನ ಮಸಿಬಿನಾಳ ಗ್ರಾಮದಲ್ಲಿ ಅಕ್ರಮವಾಗಿ ಟಂಟಂ ವಾಹನದಲ್ಲಿ ಸಾಗಿಸುತ್ತಿದ್ದ 10 ಕ್ವಿಂಟಾಲ್ ಅಕ್ಕಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪಡಿತರ ಚೀಟಿದಾರರಿಂದ ಕಡಿಮೆ ದರದಲ್ಲಿ ಅಕ್ಕಿ ಖರೀದಿಸಿ ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಆಧರಿಸಿ ಟಂಟಂ ವಾಹನವನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದ್ದಾರೆ.

ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ

ವಾಹನದಲ್ಲಿದ್ದ ₹ 22,176 ಮೌಲ್ಯದ 10 ಕ್ವಿಂಟಾಲ್​​​ ಅಕ್ಕಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಈ ಕುರಿತು ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details