ವಿಜಯಪುರ:ಮುಂದಿನ ಬಾರಿ ಉತ್ತರ ಕರ್ನಾಟಕದವರು ಸಿಎಂ ಆಗುತ್ತಾರೆ. ಯಾವುದೇ ಸಂದರ್ಭದಲ್ಲಾದರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಆಗಲಿದೆ ಎಂದು ಹೇಳಿಕೆ ನೀಡಿ ಭಾರೀ ಕೊಲಾಹಲ ಸ್ಟಷ್ಟಿಸಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.
ಸಚಿವ ಸ್ಥಾನಕ್ಕಾಗಿ ಯಾರದೋ ಕಾಲು, ತಲೆ ಹಿಡಿಯುವ ಕೆಲಸ ಮಾಡಿಲ್ಲ: ಬಸನಗೌಡ ಪಾಟೀಲ್ ಯತ್ನಾಳ್ - vijayapura news
ಕರ್ನಾಟಕದ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಆತ್ಮಸಾಕ್ಷಿಯಾಗಿ ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದೇನೆ ಹೊರತು ಸಚಿವನಾಗುವುದಕ್ಕೆ ಯಾರದೋ ಕಾಲು ಹಿಡಿದು ತಲೆ ಹಿಡಿಯುವ ಕೆಲಸ ಮಾಡಿಲ್ಲ. ಅದು ನನ್ನ ಜಾಯಮಾನ ಅಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್
ಕರ್ನಾಟಕದ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಆತ್ಮಸಾಕ್ಷಿಯಾಗಿ ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದೇನೆ ಹೊರತು ಸಚಿವನಾಗುವುದಕ್ಕೆ ಯಾರದೋ ಕಾಲು ಹಿಡಿದು ತಲೆ ಹಿಡಿಯುವ ಕೆಲಸ ಮಾಡಿಲ್ಲ. ಅದು ನನ್ನ ಜಾಯಮಾನ ಅಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಸಿಎಂ ಯಡಿಯೂರಪ್ಪ ಅವರು ಯತ್ನಾಳ್ ಅವರ ಕ್ಷೇತ್ರಕ್ಕೆ ಬರಬೇಕಿದ್ದ ಅನುಧಾನ ಹಿಂಪಡೆದಿದ್ದಕ್ಕೆ ಬಹಿರಂಗವಾಗಿ ಸಿಎಂ ವಿರುದ್ಧ ಸಿಡಿಮಿಡಿಗೊಂಡು ಸ್ಫೋಟಕ ಹೇಳಿಕೆ ನೀಡಿದ್ದರು ಎಂದು ಹೇಳಲಾಗುತ್ತಿದೆ.