ವಿಜಯಪುರ: ನ್ಯಾ. ಎ.ಜೆ.ಸದಾಶಿವ ಆಯೋಗದ ವರದಿ ಜಾರಿ ಮಾಡುವಂತೆ ಸದಾಶಿವ ಆಯೋಗ ವರದಿ ಜಾರಿ ಹೋರಾಟ ಸಮನ್ವಯ ಸಮಿತಿ ಸಂಘಟನೆ ರಾಜ್ಯಾಧ್ಯಕ್ಷ ಮುತ್ತಣ್ಣ ವೈ. ಬೆಣ್ಣೂರು ಸರ್ಕಾರಕ್ಕೆ ಆಗ್ರಹಿಸಿದರು.
ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹ - ಸದಾಶಿವ ಆಯೋಗ ಜಾರಿ ಕುರಿತು ಕೇಂದ್ರಕ್ಕೆ ಶಿಫಾರಸ್ಸು
ನ್ಯಾ. ಎ.ಜೆ.ಸದಾಶಿವ ಆಯೋಗದ ವರದಿ ಜಾರಿ ಮಾಡುವಂತೆ ಸದಾಶಿವ ಆಯೋಗ ವರದಿ ಜಾರಿ ಹೋರಾಟ ಸಮನ್ವಯ ಸಮಿತಿ ಸಂಘಟನೆ ರಾಜ್ಯಾಧ್ಯಕ್ಷ ಮುತ್ತಣ್ಣ ವೈ. ಬೆಣ್ಣೂರು ಸರ್ಕಾರಕ್ಕೆ ಆಗ್ರಹಿಸಿದರು.
ವೈ ಬೆಣ್ಣೂರು
ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹ
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಉಪ ಚುನಾವಣೆಯಲ್ಲಿ 14 ಕ್ಷೇತ್ರದಲ್ಲಿ ಪರಿಶಿಷ್ಟ ವರ್ಗದ ಮತಗಳ ಪ್ರಮಾಣ ಹೆಚ್ಚಾಗಿದೆ. ಸಿಎಂ ಯಡಿಯೂರಪ್ಪ ಅವರು ಸದಾಶಿವ ಆಯೋಗದ ವರದಿ ಜಾರಿ ಕುರಿತು ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿದರು.
ಭೋವಿ, ಲಂಬಾಣಿ ಸಮುದಾಯದವರನ್ನು ನಾವು ಸಹೋದರರಂತೆ ನೋಡುತ್ತಿದ್ದೇವೆ. ನೀವೂ ಸದಾಶಿವ ಆಯೋಗದ ವರದಿ ಜಾರಿಯಾಗಲು ಸಹಕಾರ ನೀಡಿಲ್ಲವೆಂದರೆ ನಾವು ಅನಿವಾರ್ಯವಾಗಿ ಪರಿಶಿಷ್ಟ ಪಟ್ಟಿಯಿಂದ ನಿಮ್ಮನ್ನು ಹೊರಗೆ ಇಡಬೇಕು ಎಂದು ಚಳುವಳಿ ಮಾಡುತ್ತೇವೆ ಎಂದು ಎಚ್ಚರಿಸಿದರು.