ವಿಜಯಪುರ:ಮಹಾರಾಷ್ಟ್ರದಲ್ಲಿ ಮತ್ತೆ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯದ ಒಳಹರಿವು ಮತ್ತೆ ಹೆಚ್ಚಳವಾಗಿದೆ.
ಜಲಾಶಯದಿಂದ ಭಾನುವಾರ ಸಂಜೆ 2,20,0000 ಕ್ಯೂಸೆಕ್ ನೀರು ಹೊರ ಬಿಡಲಾಗಿದೆ. ರಾತ್ರಿ ಇನ್ನೂ ಅಧಿಕ ಪ್ರಮಾಣದಲ್ಲಿ ಆಲಮಟ್ಟಿ ಜಲಾಶಯದಿಂದ ನಾರಾಯಣಪುರ ಜಲಾಶಯಕ್ಕೆ ಹೆಚ್ಚುವರಿ ನೀರು ಬಿಡುವ ಸಾಧ್ಯತೆ ಇರುವ ಕಾರಣ ನದಿ ಪಾತ್ರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಆಲಮಟ್ಟಿ ಜಲಾಶಯದ ಹೊರಹರಿವು ಹೆಚ್ಚಳ ಭಾನುವಾರ ಬೆಳಗ್ಗೆ ಆಲಮಟ್ಟಿ ಜಲಾಶಯದ ಒಳಹರಿವು 119674 ಕ್ಯೂಸೆಕ್ ಹಾಗೂ ಹೊರ ಹರಿವು 83,922 ಕ್ಯೂಸೆಕ್ ಇತ್ತು. ಇದರಿಂದ ಜಲಾಶಯದಲ್ಲಿ 116.034 ಟಿಎಂಸಿ ನೀರು ಸಂಗ್ರಹವಾಗಿತ್ತು. 519.19 ಮೀಟರ್ ನೀರು ಸಂಗ್ರಹಿಸಲಾಗಿತ್ತು. ಮಧ್ಯಾಹ್ನ ವೇಳೆ ಒಳಹರಿವು ಸ್ವಲ್ಪ ಕಡಿಮೆಯಾಗಿ 1.05,000 ಕ್ಯೂಸೆಕ್ ನೀರು ಹರಿದು ಬಂದಿತ್ತು. ಆದರೆ ಹೊರ ಹರಿವಿನಲ್ಲಿ ಏಕಾಏಕಿ 1 ಲಕ್ಷ ಕ್ಯೂಸೆಕ್ ನಷ್ಟು ಹೆಚ್ಚುವರಿ ನೀರು ಹರಿಸಲಾಗಿದೆ. ಮಧ್ಯಾಹ್ನ 1,80,000 ಕ್ಯೂಸೆಕ್ ನೀರು ಹರಿಸಲಾಗಿದೆ. ಮಧ್ಯಾಹ್ನ ಜಲಾಶಯದಲ್ಲಿ 519.17 ಮೀಟರನಷ್ಟು ನೀರು ಇದ್ದು, 115.709 ಟಿಎಂಸಿ ನೀರು ಸಂಗ್ರಹಿಸಲಾಗಿದೆ.
ಸಂಜೆ ಮತ್ತೆ ಹೆಚ್ಚುವರಿಯಾಗಿ ನೀರು ಬಿಡಲಾಗಿದೆ. ಸದ್ಯ 2,20,0000 ಕ್ಯೂಸೆಕ್ ಹೊರಬಿಡಲಾಗಿದೆ. ಒಳಹರಿವು ಸಹ ಜಾಸ್ತಿಯಾಗಿದ್ದು ಸಂಜೆಯವರೆಗೆ 134790 ಕ್ಯೂಸೆಕ್ ನೀರು ಆಲಮಟ್ಟಿ ಜಲಾಶಯಕ್ಕೆ ಹರಿದು ಬಂದಿದೆ. 114.57 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ನೀರಿನ ಮಟ್ಟ 519.10 ಮೀಟರ್ ಇದೆ.
ಒಳಹರಿವು ಆಧರಿಸಿ ಹೊರಹರಿವು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.
ಎಚ್ಚರಿಕೆ ವಹಿಸಲು ಸೂಚನೆ: ಆಲಮಟ್ಟಿ ಜಲಾಶಯದಿಂದ ಭಾನುವಾರ ಮಧ್ಯಾಹ್ನ 1.80 ಲಕ್ಷ ಕ್ಯೂಸೆಕ್ ನೀರು ನಾರಾಯಣಪುರ ಜಲಾಶಯಕ್ಕೆ ಹರಿದು ಬರುತ್ತಿರುವ ಕಾರಣ ನದಿ ತೀರದ ಪಾತ್ರದಲ್ಲಿ ಜನರಿಗೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ ಎಂದು ಮುದ್ದೇಬಿಹಾಳ ತಹಶೀಲ್ದಾರ್ ಜಿ.ಎಸ್.ಮಳಗಿ ತಿಳಿಸಿದ್ದಾರೆ.
'ಈ ಟಿವಿ ಭಾರತ' ದೊಂದಿಗೆ ಮಾತನಾಡಿದ ಅವರು, ನದಿ ತೀರದ ಪಾತ್ರದಲ್ಲಿ ಕಟ್ಟೆಚ್ಚರ ವಹಿಸುವಂತೆ ಗ್ರಾಮಗಳ ಜನತೆಗೆ ಡಂಗೂರ ಸಾರುವ ಮೂಲಕ ತಿಳುವಳಿಕೆ ನೀಡಲಾಗಿದೆ. ಈ ಕುರಿತು ಸಂಬಂಧಿಸಿದ ನೋಡಲ್ ಅಧಿಕಾರಿಗಳಿಗೂ ಸಹ ತಿಳಿಸಲಾಗಿದ್ದು, ಎಂಥ ಪರಿಸ್ಥಿತಿ ಎದುರಾದರೂ ಅದನ್ನು ನಿಭಾಯಿಸಲು ತಾಲೂಕು ಆಡಳಿತ ಪೂರ್ವ ಸಿದ್ದತೆ ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ.