ಕರ್ನಾಟಕ

karnataka

ETV Bharat / state

ವಿಜಯಪುರ ಡಿಸಿ ಕಚೇರಿ ಬಳಿ ಇಂದಿರಾ ಕ್ಯಾಂಟೀನ್ ಆರಂಭಿಸಲು ಮನವಿ - Vijayapura latest news

ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲಿ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ಪ್ರಗತಿಪರ ಸಂಘಟನೆ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ವಿಜಯಪುರ
ವಿಜಯಪುರ

By

Published : Jul 29, 2020, 4:37 PM IST

ವಿಜಯಪುರ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

ಪ್ರತಿದಿನ ನೂರಾರು ಬಡ ಜ‌ನರು ಕೆಲಸಗಳಿಗೆ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡುತ್ತಾರೆ. ಆದರೆ ಜಿಲ್ಲಾಡಳಿತ ಜನರ ಅನುಕೂಲಕ್ಕೆ ಯಾವುದೇ ವ್ಯವಸ್ಥೆ ಕಲ್ಪಿಸಿಲ್ಲ. ನಗರದಲ್ಲಿರುವ ಇಂದಿರಾ ಕ್ಯಾಂಟೀನ್‌ಗಳು ದೂರ ದೂರದ ಪ್ರದೇಶಗಳಲ್ಲಿವೆ. ಬಡ ಜನರಿರುವ ಸ್ಥಳಗಳಲ್ಲಿ ಅನುಕೂಲವಾಗುವಂತೆ ಕ್ಯಾಂಟೀನ್ ಪ್ರಾರಂಭಿಸಿಲ್ಲ. ಸರ್ಕಾರಿ ಐಟಿಐ ಕಾಲೇಜು ಬಳಿ ಇರುವ ಕ್ಯಾಂಟೀನ್ ಜಿಲ್ಲಾಧಿಕಾರಿ ಕಚೇರಿ ಆವರಣ ಅಥವಾ ಎಲ್‌ಬಿ‌ಎಸ್ ಮಾರುಕಟ್ಟೆಗೆ ಸ್ಥಳಾಂತರಿಸಿದ್ರೆ ಅನುಕೂಲವಾಗುತ್ತದೆ ಅನ್ನೋದು ಪ್ರಗತಿಪರ ಸಂಘಟನೆ ಕಾರ್ಯಕರ್ತರ ಆಗ್ರಹವಾಗಿದೆ.

ABOUT THE AUTHOR

...view details