ವಿಜಯಪುರ: ಕೋವಿಡ್ 19 ಸೋಂಕಿತರಿಗೆ ಕಡಿಮೆ ದರದಲ್ಲಿ ಸೂಕ್ತ ಚಿಕಿತ್ಸೆ ನೀಡುವಂತೆ ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ವಿಜಯಪುರ: ನಿಗದಿತ ದರದಲ್ಲಿ ಸೂಕ್ತ ಕೊರೊನಾ ಚಿಕಿತ್ಸೆ ನೀಡುವಂತೆ ಒತ್ತಾಯ - Covid treatment price
ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆ ದರ ಪಟ್ಟಿಯ ಫಲಕ ಹಾಕಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕೊರೊನಾ ವೈರಸ್‌ನಿಂದ ಜನರು ಉದ್ಯೋಗವಿಲ್ಲದೆ ಆರ್ಥಿಕ ಸಂಕಷ್ಟಲ್ಲಿ ಸಿಲುಕುವಂತಾಗಿದೆ. ಆದರೆ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆ ನೀಡಲು ಮನಬಂದತೆ ರೋಗಿಗಳಿಂದ ಹಣ ಪಡೆಯುತ್ತಿರುವುದು ಬೆಳಕಿಗೆ ಬರುತ್ತಿದೆ. ಸರ್ಕಾರ ನಿಗದಿಪಡಿಸಿದ ದರದಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಇನ್ನು ಪೂರ್ಣ ಪ್ರಮಾಣದಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡವಂತೆ ಸರ್ಕಾರ ಸೂಕ್ತ ಕ್ರಮಕ್ಕೆ ಮುಂದಾಗಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ದರ ಪಟ್ಟಿಯ ಫಲಕ ಹಾಕಬೇಕು. ಕೊರೊನಾ ಚಿಕಿತ್ಸೆಯನ್ನು ಸರ್ಕಾರದ ವಿವಿಧ ಯೋಜನೆ, ಆರೋಗ್ಯ ಕಾರ್ಡ್‌ಗಳ ವ್ಯಾಪ್ತಿಗೆ ಸೇರಿಸಿ ಉಚಿತ ಚಿಕಿತ್ಸೆ ನೀಡುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.