ವಿಜಯಪುರ: ಅನಗತ್ಯವಾಗಿ ಸಂಚರಿಸುವ ವಾಹನಗಳನ್ನು ಪೊಲೀಸರು ತಪಾಸಣೆ ನಡೆಸಿ ವಾಹನದ ನಂಬರ್ ನಮೂದಿಸಿಕೊಳ್ಳುತ್ತಿದ್ದಾರೆ.
ವಿಜಯಪುರದಲ್ಲಿ ಅನಗತ್ಯವಾಗಿ ಸಂಚರಿಸುವ ವಾಹನಗಳ ತಪಾಸಣೆ - in Vijayapura
ಕೊರೊನಾ ಆತಂಕ ಹೆಚ್ಚಾಗಿರುವ ಬೆನ್ನಲ್ಲೆ ರಸ್ತೆಗಿಳಿಯುವ ವಾಹನ ಸವಾರರಿಗೆ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದು, ರಸ್ತೆಗೆ ಯಾವುದೇ ವಾಹನಗಳು ಬಂದರೂ ತಪಾಸಣೆ ನಡೆಸಿ ವಾಹನದ ನಂಬರ್ ನಮೂದಿಸಿಕೊಳ್ಳುತ್ತಿದ್ದಾರೆ.
ನಗರದಲ್ಲಿ ಕೊರೊನಾ ಆತಂಕ ಹೆಚ್ಚಾಗಿರುವ ಬೆನ್ನಲ್ಲೇ ರಸ್ತೆಗಿಳಿಯುವ ವಾಹನ ಸವಾರರಿಗೆ ಪೊಲೀಸರು ಬಿಸಿ ಮುಟ್ಟಿಸುವ ಕಾರ್ಯಕ್ಕೆ ಮುಂದಾಗಿದ್ದು, ರಸ್ತೆಗೆ ಯಾವುದೇ ವಾಹನಗಳು ಬಂದರು ಕೂಡ ಅವುಗಳ ತಡೆದು ಎಲ್ಲಿಗೆ ಹೋಗುತ್ತಿದ್ದಾರೆ ಎಂಬ ಮಾಹಿತಿಯನ್ನು ಪೊಲೀಸರು ಪಡೆದುಕೊಳ್ಳುತ್ತಿದ್ದಾರೆ.
ಕೇಂದ್ರ ಬಸ್ ನಿಲ್ದಾಣ, ಗಾಂಧಿ ಚೌಕ್, ಸ್ಟೇಷನ್ ರಸ್ತೆ ಸೇರಿದಂತೆ ನಗರದ ಹಲವು ಭಾಗಗಳಲ್ಲಿ ಓಡಾಡುವ ವಾಹನಗಳ ಪೊಲೀಸ್ ಸಿಬ್ಬಂದಿ ನಿಗಾವಹಿಸಿ ಅವುಗಳ ನಂಬರ್ ಬರೆದುಕೊಂಡು ರಸ್ತೆಗೆ ಬಾರದಂತೆ ತಿಳಿ ಹೇಳುತ್ತಿದ್ದಾರೆ. ಇನ್ನೂ ಕೆಲವು ಪ್ರದೇಶಗಳಲ್ಲಿ ಅನಗತ್ಯವಾಗಿ ಓಡಾಡುವ ವಾಹನ ಸವಾರರಿಗೆ ಪೊಲೀಸರು ಲಾಠಿ ರುಚಿ ತೋರಿಸುವ ಮೂಲಕ ಮನೆಯಲ್ಲಿರುವಂತೆ ತಿಳಿ ಹೇಳುತ್ತಿರುವ ದೃಶ್ಯಗಳು ಕಂಡು ಬರುತ್ತಿವೆ.