ವಿಜಯಪುರ:ವೀರ ಸಾವರ್ಕರ್ಗೆ ಭಾರತ ರತ್ನ ನೀಡುವುದಕ್ಕೆ ವಿರೋಧ ವ್ಯಕ್ತವಾಗುತ್ತಿರುವುದು ವಿಷಾದಕರ. ವೀರ ಸಾವರ್ಕರ್ ಅವರಂಥ ನಾಯಕರು ಹೋರಾಟ ನಡೆಸಿದ್ದರಿಂದ ಅದರ ಫಲವನ್ನು ನಾವು ಉಣ್ಣುತ್ತಿದ್ದೇವೆ ಎಂದು ಅನರ್ಹ ಶಾಸಕ ಎಚ್ ವಿಶ್ವನಾಥ್ ವಿಜಯಪುರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ನನ್ನ ಕುಟುಂಬ, ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರಾರೂ ಸ್ವಾತಂತ್ರ್ಯಕ್ಕಾಗಿ ಸತ್ತಿಲ್ಲ, ನಮ್ಮ ಆಸ್ತಿಯು ಹೋಗಿಲ್ಲ ಎಂದು ಸಾವರ್ಕರ್ಗೆ ಭಾರತ ರತ್ನ ನೀಡುವ ಕುರಿತು ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದರು.
ನಾಳೆ ಸುಪ್ರೀಂಕೋರ್ಟಿನಲ್ಲಿ ನಮ್ಮ ಪರ ತೀರ್ಪು ಬರುವ ವಿಶ್ವಾಸವಿದೆ. ಕಾನೂನು ಬಾಹಿರವಾಗಿ ಅಂದಿನ ಸ್ಪೀಕರ್ ರಮೇಶ್ ಕುಮಾರ್ ನೀಡಿರುವ ತೀರ್ಪಿನ ವಿರುದ್ಧ ನಾವು ಸುಪ್ರೀಂ ಕೋರ್ಟ್ಗೆ ಹೋಗಿದ್ದೇವೆ. ಸುಪ್ರೀಂಕೋರ್ಟ್ ನಮ್ಮ ವಾದ ಎತ್ತಿ ಹಿಡಿಯುವ ನಂಬಿಕೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಸಿದ್ದರಾಮಯ್ಯ ತಮ್ಮ ಕುರಿತು ಆಡಿರುವ ಮಾತಿಗೆ, ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿಗಳು ದೊಡ್ಡವರು, ಸತ್ಯವಂತರು, ರಾಷ್ಟ್ರ ನಾಯಕರು, ಸ್ವಾತಂತ್ರ್ಯ ಪ್ರೇಮಿಗಳು ಅವರ ಬಗ್ಗೆ ಮೈಸೂರಿನಲ್ಲಿ ಉತ್ತರ ನೀಡುತ್ತೇನೆ. ತಿಕೋಟಾದಿಂದ ಬೆಳಗಾವಿ ಮೂಲಕ ದೆಹಲಿಗೆ ತೆರುಳುತ್ತೇನೆ ಎಂದು ಅನರ್ಹ ಶಾಸಕ ಎಚ್ ವಿಶ್ವನಾಥ್ ಹೇಳಿದರು