ವಿಜಯಪುರ: ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿರುವ ಕೇಂದ್ರದ ನಿರ್ಧಾರವನ್ನು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಾಗತಿಸಿದ್ದಾರೆ.
ಬಿಜೆಪಿಗೆ ಪೂರ್ಣ ಬಹುಮತ ಬಂದರೆ ಜಮ್ಮು ಕಾಶ್ಮೀರಕ್ಕೆ ವಿಶೇಷವಾಗಿ ನೀಡಿದ್ದ ಕಲಂ 370 ಹಾಗೂ 35 ( A) ರದ್ದು ಮಾಡೋದಾಗಿ ಭರವಸೆ ನೀಡಿದ್ದೆವು. ಈಗ ರದ್ದು ಮಾಡುವ ಮೂಲಕ ನಾವು ನುಡಿದಂತೆ ನಡೆದಿದ್ದೇವೆ.