ವಿಜಯಪುರ: ಕಾಲುವೆಗಳ ದುರಸ್ತಿ ಕಾಮಗಾರಿಯನ್ನು ಗುತ್ತಿಗೆದಾರರು ಕಳಪೆ ಮಟ್ಟದಲ್ಲಿ ನಡೆಸಿದ್ದಾರೆ ಎಂದು ಆರೋಪಿಸಿ ಜಯ ಕರ್ನಾಟಕ ರಕ್ಷಣಾ ಸೇನೆ ಕಾರ್ಯಕರ್ತರು ಪ್ರತಿಭಟಿಸಿದರು.
ವಿಜಯಪುರ: ಕಾಲುವೆಗಳ ಕಳಪೆ ಕಾಮಗಾರಿ ವಿರೋಧಿಸಿ ಪ್ರತಿಭಟನೆ
ವಿಜಯಪುರದ ಕಾಲುವೆಗಳ ದುರಸ್ತಿ ಕಾಮಗಾರಿಯಲ್ಲಿ ಗುತ್ತಿಗೆದಾರರು ಕಳಪೆ ಕೆಲಸ ನಿರ್ವಹಿಸಿದ್ದಾರೆ ಎಂದು ಜಯ ಕರ್ನಾಟಕ ರಕ್ಷಣಾ ಸೇನೆ ಕಾರ್ಯಕರ್ತರು ಆರೋಪಿಸಿದ್ದಾರೆ.
ನಗರದ ಅಂಬೇಡ್ಕರ್ ವೃತ್ತದಲ್ಲಿ ಭುವನೇಶ್ವರಿ ಮಾತೆಯ ವೇಷ ಧರಸಿ ಅಧಿಕಾರಿಗಳ ವಿರುದ್ಧ ವಿನೂತನ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೆಬಿಜೆಎನ್‌ಎಲ್‌ಯಿಂದ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಕಾಮಗಾರಿ ನೀಡಲಾಗಿದೆ. ಆದ್ರೆ ಕೆಲವು ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡಿ ಕೈ ತೊಳೆದುಕೊಂಡಿದ್ದಾರೆ ಎಂದು ದೂರಿದರು.
ಇನ್ನು ಕೆಲವೆಡೆ ಕಾಲುವೆಗಳ ಹೂಳು ತೆಗೆಯದೆ ಕಾಮಗಾರಿ ಪೂರ್ಣಗೊಳಿಸಿ ಬಿಲ್ ತೆಗೆದುಕೊಂಡಿದ್ದಾರೆ. ಅಲ್ಲದೇ, ಗುತ್ತಿಗೆದಾರರ ಕಾರ್ಯಕ್ಕೆ ಅಧಿಕಾರಿಗಳು ಕೂಡಾ ಸಾಥ್ ನೀಡಿದ್ದು, ಪರಿಣಾಮ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಕೆಲವು ರೈತರ ಜಮೀನುಗಳಿಗೆ ನೀರು ನುಗ್ಗಿರುವ ಪರಿಣಾಮ ರೈತರ ಬೆಳೆಗಳು ನಾಶವಾಗುತ್ತಿವೆ. ಈ ಕುರಿತು ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.