ವಿಜಯಪುರ:ಬೆಳಗಾವಿಯ ಪೀರನವಾಡಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪಿಸಲು ಅನುಮತಿ ನೀಡುವಂತೆ ಜಯ ಕರ್ನಾಟಕ ರಕ್ಷಣಾ ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ರಾಯಣ್ಣ ಪ್ರತಿಮೆ ಸ್ಥಾಪಿಸಲು ಅನುಮತಿಸುವಂತೆ ಜಯ ಕರ್ನಾಟಕ ಕಾರ್ಯಕರ್ತರ ಮನವಿ
ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ನಿರ್ಮಾಣ ಮಾಡಲು ಜಿಲ್ಲಾಡಳಿತ ಅಡ್ಡಿಪಡಿಸುತ್ತಿದೆ. ಇದು ಕನ್ನಡಿಗರಿಗೆ ಮಾಡುತ್ತಿರುವ ಅನ್ಯಾಯವಾಗಿದೆ. ಈ ಕೂಡಲೇ ಸಮಸ್ಯೆ ಬಗೆಹರಿಸಿ ಪ್ರತಿಮೆ ನಿರ್ಮಾಣ ಮಾಡಲು ಅವಕಾಶ ನೀಡಬೇಕು ಎಂದು ಜಯ ಕರ್ನಾಟಕ ರಕ್ಷಣಾ ಸೇನೆ ವಿಜಯಪುರದಲ್ಲಿ ಮನವಿ ಮಾಡಿದೆ.
ರಾಯಣ್ಣ ಪ್ರತಿಮೆ ಸ್ಥಾಪಿಸಲು ಅನುಮತಿಸುವಂತೆ ಕಾರ್ಯಕರ್ತರ ಮನವಿ
ರಾಯಣ್ಣನ ತವರು ಜಿಲ್ಲೆಯಲ್ಲಿಯೇ ಪ್ರತಿಮೆ ನಿರ್ಮಾಣಕ್ಕೆ ಜಿಲ್ಲಾಡಳಿತ ಅಡ್ಡಿಪಡಿಸುತ್ತಿದೆ. ಅಧಿಕಾರಿಗಳು ಕುಂಟು ನೆಪ ಹೇಳಿ ಅನುಮತಿ ನಿರಾಕರಿಸಿಸುತ್ತಿರುವುದು ಅನ್ಯಾಯ ಮಾಡಿದಂತಾಗಿದೆ. ಮರಾಠಿ ಭಾಷಿಕರ ಮತಗಳಿಗಾಗಿ ರಾಜಕಾರಣಿಗಳು ಮೂರ್ತಿ ಸ್ಥಾಪನೆ ವಿಚಾರವಾಗಿ ಮೌನಕ್ಕೆ ಶರಣಾಗಿದ್ದಾರೆ ಎಂದು ಕನ್ನಡ ಪರ ಸಂಘಟನೆ ಕಾರ್ಯಕರ್ತರು ಕಿಡಿ ಕಾರಿದರು.
ಜನಪ್ರತಿನಿಧಿಗಳು ಮರಾಠಿ ವ್ಯಾಮೋಹಕ್ಕೆ ಒಳಗಾಗಿ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವ ಕಾರ್ಯ ಮಾಡುತ್ತಿರುವ ನಡೆ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.