ಕರ್ನಾಟಕ

karnataka

ETV Bharat / state

ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರಿಸುವಂತೆ ಜಯಮೃತ್ಯುಂಜಯ ಶ್ರೀ ಆಗ್ರಹ - Jayamritunjaya Sri statement

ಪಂಚಮಸಾಲಿ ಸಮುದಾಯವನ್ನು 2ಎ ಕೆಟಗರಿಗೆ ಸೇರಿಸುವಂತೆ ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಶ್ರೀಗಳು ಆಗ್ರಹಿಸಿದ್ದಾರೆ.

Jayamritunjaya Sri
ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಶ್ರೀ

By

Published : Feb 12, 2020, 8:38 PM IST

ವಿಜಯಪುರ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸೌಲಭ್ಯ ಕಲ್ಪಿಸಲು ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಶ್ರೀಗಳು ಸರ್ಕಾರವನ್ನು ಒತ್ತಾಯಿಸಿದರು.

ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಶ್ರೀ

ಜಿಲ್ಲೆಯ ಮುದ್ದೇಬಿಹಾಳದಲ್ಲಿ ಕಿತ್ತೂರ ರಾಣಿ ಚೆನ್ನಮ್ಮನವರ 191ನೇ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜ ರಾಜ್ಯದಲ್ಲಿ ಹೆಚ್ಚು ಜನಸಂಖ್ಯೆ ಹೊಂದಿದೆ. ಸಚಿವ ಸಂಪುಟದಲ್ಲಿ ಮೂರು ಅಥವಾ ನಾಲ್ಕು ಸ್ಥಾನವನ್ನು ಈ ಸಮುದಾಯಕ್ಕೆ ನೀಡಬೇಕು. ಕನಿಷ್ಠ ಇಬ್ಬರನ್ನಾದರೂ ಮಂತ್ರಿ ಮಾಡಬೇಕು ಎಂದು ಒತ್ತಾಯಿಸಿದರು.

ಇಬ್ಬರಿಗೆ ಸಚಿವ ಸ್ಥಾನ‌ ಕೊಡಿ, ಇಲ್ಲವೇ 2024 ಕ್ಕೆ ಪಂಚಮಸಾಲಿ ಸಮುದಾಯದವರು ಸಿಎಂ ಆಗ್ತಾರೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು. ಅದು ಆಗದೇ ಹೋದರೆ ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರಿಸುವಂತೆ ಸ್ವಾಮೀಜಿ ಆಗ್ರಹಿಸಿದರು.

ABOUT THE AUTHOR

...view details