ಕರ್ನಾಟಕ

karnataka

ETV Bharat / state

ರಾಜ್ಯ ಸರ್ಕಾರದ ವಿರುದ್ಧ ವಿಜಯಪುರದಲ್ಲಿ ಜೆಡಿಎಸ್​​ ಪ್ರತಿಭಟನೆ - ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದ ಜೆಡಿಎಸ್​

ರಾಜ್ಯದಲ್ಲಿನ ಬಿಜೆಪಿ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದ್ದು, ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಎದುರು ಜೆಎಡಿಎಸ್​ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

JDS protests
ಪ್ರತಿಭಟನೆ ನಡೆಸಿದ ಜೆಡಿಎಸ್​

By

Published : Jun 29, 2020, 5:19 PM IST

ವಿಜಯಪುರ:ರಾಜ್ಯ ಸರ್ಕಾರ ಜನಪರ ಆಡಳಿತ ನೀಡಲು ವಿಫಲವಾಗಿದೆ ಎಂದು ಆರೋಪಿಸಿ ಜಿಲ್ಲಾ ಜೆಡಿಎಸ್‌ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸರ್ಕಾರ ಕಳೆದ ಮೂರು ತಿಂಗಳಿನಿಂದ ಜನ ವಿರೋಧಿ ನೀತಿಗಳನ್ನ ಅನುಸರಿಸುತ್ತಿದ್ದು, ಭೂ ಸುಧಾರಣಾ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ ಸೇರಿದಂತೆ ಇತರೆ ಕಾಯ್ದೆಗಳ ತಿದ್ದುಪಡಿ ಮೂಲಕ ರೈತ ಸಂಕುಲಕ್ಕೆ ಅನ್ಯಾಯ ಮಾಡಲು ಹೊರಟಿದೆ ಎಂದು ಕಿಡಿಕಾರಿದರು.

ಕಾಲ ಕಾಲಕ್ಕೆ ರೈತರಿಗೆ ಬೀಜ, ಗೊಬ್ಬರ ಸಿಗುತ್ತಿಲ್ಲ ಹಾಗೂ ದ್ರಾಕ್ಷಿ ಬೆಳೆಗಾರರಿಗೆ ನ್ಯಾಯಯುತ ಬೆಲೆ ನೀಡದೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರು ಆಕ್ರೋಶ ವ್ಯಕ್ತಪಡಿಸಿದರು.

ಕೊರೊನಾ ಪ್ಯಾಕೇಜ್​ಅನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿ ಹಲವು ದಿನಗಳು‌ ಕಳೆದರೂ ಸಹ ಸಾಮಾನ್ಯ ಜನರಿಗೆ ತಲುಪುತ್ತಿಲ್ಲ‌. ರಾಜ್ಯದಲ್ಲಿ 3 ತಿಂಗಳಿಂದ ತೈಲ ಬೆಲೆಯಲ್ಲಿ ಏರಿಕೆಯಾಗುತ್ತಿದೆ. ಆದರೆ ಸರ್ಕಾರ ಮಾತ್ರ ನಮಗೂ ಇದಕ್ಕೂ ಸಂಬಂಧವಿಲ್ಲದಂತೆ ವರ್ತಿಸುತ್ತಿದೆ. ತಮ್ಮ ಆಡಳಿತ ವೈಫಲ್ಯ ಮುಚ್ಚಿ ಹಾಕಲು ಜನ ವಿರೋಧಿ ನೀತಿಗಳನ್ನ ಅನುಸರಿಸುತ್ತಿದೆ ಎಂದು ಆಕ್ರೋಶ ಹೊರ ಹಾಖಿದರು.

ABOUT THE AUTHOR

...view details