ವಿಜಯಪುರ: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಕುಟುಂಬ ಸಮೇತರಾಗಿ ನಗರದ ಸಿದ್ದೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಮತಗಟ್ಟೆ 61ರಲ್ಲಿ ಸಾಮಾನ್ಯರಂತೆ ಸರದಿಯಲ್ಲಿ ನಿಂತು ತಮ್ಕ ಹಕ್ಕು ಚಲಾಯಿಸಿದರು.
ನಂತರ ಮಾಧ್ಯಮದ ಜೊತೆ ಮಾತನಾಡಿ, ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ ಅವರು ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. ಕನಿಷ್ಠ 130 ಸ್ಥಾನ ಗಳಿಸಲಿದೆ. ವಿಜಯಪುರ ಜಿಲ್ಲೆಯಲ್ಲಿ 8 ಮತಕ್ಷೇತ್ರದಲ್ಲಿ ಎಷ್ಟು ಸ್ಥಾನ ಬರುತ್ತದೆ ಎಂದು ಭವಿಷ್ಯ ನುಡಿಯಲು ಆಗುವುದಿಲ್ಲ. ಆದರೆ, ಸರ್ಕಾರ ಬಿಜೆಪಿಯೇ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗೋವಾದಿಂದ ಬಂದು ಮತ ಚಲಾವಣೆ: ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದಲ್ಲಿ ಮತ ಚಲಾಯಿಸಲು ಗೋವಾಕ್ಕೆ ದುಡಿಯಲು ಹೋಗಿದ್ದ ಕಾರ್ಮಿಕರು ಮುದ್ದೇಬಿಹಾಳ ಬಸ್ ನಿಲ್ದಾಣಕ್ಕೆ ಬೆಳಗ್ಗೆ ಬಂದಿಳಿದರು. ನಂತರ ತಮ್ಮ ತಮ್ಮ ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸಿದರು.