ಕರ್ನಾಟಕ

karnataka

By

Published : Oct 29, 2020, 10:45 PM IST

ETV Bharat / state

ವಿವಿಧ ಜಿಲ್ಲೆಗಳಲ್ಲಿ ನಿಯಂತ್ರಣಕ್ಕೆ ಬರುತ್ತಿರುವ ಕೋವಿಡ್​: ಗುಣಮುಖರ ಸಂಖ್ಯೆಯಲ್ಲಿ ಏರಿಕೆ

ಕಲಬುರಗಿ, ವಿಜಯಪುರ, ಯಾದಗಿರಿ ಮತ್ತು ಕೊಪ್ಪಳ ಜಿಲ್ಲೆಗಳ ಕೋವಿಡ್​ ಪ್ರಕರಣಗಳ ಮಾಹಿತಿ ಈ ರೀತಿಯಿದೆ..

Karnataka Covid update
ಕರ್ನಾಟಕ ಕೋವಿಡ್​ ಸುದ್ದಿ

ಕಲಬುರಗಿ : ನಗರದಲ್ಲಿ ಇಂದು ಕೊರೊನಾ ಸೋಂಕಿನಿಂದ 78 ವರ್ಷದ ವೃದ್ಧ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಇದುವರೆಗೆ ಮೃತಪಟ್ಟವರ ಸಂಖ್ಯೆ 312 ಕ್ಕೆ ಏರಿಕೆಯಾಗಿದೆ. ನಗರದ ಹಳೆ ಜೇವರ್ಗಿ ರಸ್ತೆಯ ನಿವಾಸಿ 78 ವರ್ಷದ ವೃದ್ಧ ಮೃತ ಪಟ್ಟಿದ್ದಾರೆ. ಇಂದು ಜಿಲ್ಲೆಯಲ್ಲಿ ಹೊಸದಾಗಿ 35 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 19,613 ಆಗಿದೆ. ಇಂದು 61 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 18,775 ಕ್ಕೆ ಏರಿಕೆಯಾಗಿದೆ. ಪ್ರಸ್ತುತ 526 ಪ್ರಕರಣಗಳಿವೆ.

ಯಾದಗಿರಿ: ಜಿಲ್ಲೆಯಲ್ಲಿಂದು ಹೊಸದಾಗಿ 29 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 10,037 ಕ್ಕೆ ಏರಿಕೆಯಾಗಿದೆ. ಇಂದು 40 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,733 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 243 ಮಂದಿ ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಒಟ್ಟು 61 ಜನ ಮೃತಪಟ್ಟಿದ್ದಾರೆ.

ವಿಜಯಪುರ : ಜಿಲ್ಲೆಯಲ್ಲಿ ಇಂದು 71 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 12,384 ಆಗಿದೆ. ಇಂದು 52 ಜನ ಗುಣಮುಖರಾಗಿದ್ದು,ಇದುವರೆಗೆ 11,718 ಜನ ಕೋವಿಡ್​ ಮುಕ್ತರಾಗಿದ್ದಾರೆ. ಕೋವಿಡ್ ಅಲ್ಲದ ಕಾಯಿಲೆಗಳಿಂದ ಇದುವರೆಗೆ 194 ಸೋಂಕಿತರು ಮೃತಪಟ್ಟಿದ್ದಾರೆ. ಪ್ರಸ್ತುತ 472 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ 1,39, 738 ಜನರ ಮೇಲೆ ನಿಗಾ ಇಡಲಾಗಿದ್ದು, 1,39,145 ಜನರ ಸ್ಯಾಂಪಲ್ ಪಡೆಯಲಾಗಿದೆ. ಈ ಪೈಕಿ 1,25, 280 ಜನರ ವರದಿ ನೆಗಟಿವ್ ಬಂದಿದ್ದು, 12,384 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 1,486 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.

ಕೊಪ್ಪಳ :ಜಿಲ್ಲೆಯಲ್ಲಿ ಇಂದು 23 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 13,316 ಕ್ಕೆ ಏರಿಕೆಯಾಗಿದೆ. ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಗಂಗಾವತಿ ತಾಲೂಕಿನಲ್ಲಿ 10, ಕೊಪ್ಪಳದಲ್ಲಿ 9, ಕುಷ್ಟಗಿಯಲ್ಲಿ 2 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 2 ಪ್ರಕರಣ ಸೇರಿ ಇಂದು ಒಟ್ಟು 23 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 280 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇಂದು 51 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 12,660 ಜನರು ಗುಣಮುಖರಾಗಿದ್ದಾರೆ. ಇದುವರೆಗೆ 336 ಜನರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ABOUT THE AUTHOR

...view details