ವಿಜಯಪುರ:ಮರಾಠ ಅಭಿವೃದ್ಧಿ ನಿಗಮಕ್ಕೆ ವಿರೋಧಿಸುತ್ತಿರುವ ಕನ್ನಡಪರ ಸಂಘಟನೆಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶಾಸಕರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಕರವೇ ಪ್ರತಿಭಟನೆ - vijaypura protest news
ಕನ್ನಡಪರ ಸಂಘಟನೆಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕರವೇ ಪ್ರತಿಭಟನೆ
ನಗರದ ಸ್ಟೇಷನ್ ರಸ್ತೆಯಲ್ಲಿರುವ ಶಾಸಕ ಯತ್ನಾಳ್ ಕಚೇರಿಯ ನಾಮಫಲಕದ ಮುಂಭಾಗದಲ್ಲಿ ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಶಾಸಕ ಯತ್ನಾಳ್ ಅವರು ಕನ್ನಡಪರ ಹೋರಾಟಗಾರಿಗೆ ರೋಲ್ ಕಾಲ್ ಹೋರಾಟಗಾರು ಎಂದಿರುವುದು ಅವರಿಗೆ ಶೋಭೆ ತರವುದಿಲ್ಲ ಎಂದು ಆಕ್ರೋಶ ಹೊರಹಾಕಿದರು.
ಡಿ. 5ರಂದು ಬಂದ್ ಕುರಿತು ಸಂಘಟನೆ ಮುಖಂಡ ನಿರ್ಣಯ ಮಾಡಿದ ಮೇಲೆ ಹೋರಾಟ ನಡೆಸಲಾಗುವುದು ಎಂದು ಕರವೇ ಜಿಲ್ಲಾಧ್ಯಕ್ಷ ಎಂ.ಸಿ.ಮುಲ್ಲಾ ಮಾಧ್ಯಮಗಳಿಗೆ ಮಾಹಿತಿ ನೀಡಿದರು.