ವಿಜಯಪುರ: ಆಡಳಿತ ಭಾಷೆಯಾಗಿ ಕೇಂದ್ರ ಸರ್ಕಾರ ಹಿಂದಿ ಭಾಷೆ ಹೇರಿಕೆ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಹಿಂದಿ ಭಾಷೆ ಹೇರಿಕೆ ವಿರೋಧಿಸಿ ಕರವೇ ಪ್ರತಿಭಟನೆ
ಹಿಂದಿ ಭಾಷೆ ಹೇರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಹಿಂದಿ ಹೇರಿಕೆ ಮಾಡುವ ಮೂಲಕ ಪ್ರಾದೇಶಿಕ ಭಾಷೆಯನ್ನು ಹತ್ತಿಕ್ಕುವ ಕಾರ್ಯಕ್ಕೆ ಮುಂದಾಗುತ್ತಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಹಿಂದಿ, ಇಂಗ್ಲಿಷ್ ಭಾಷೆ ಹೇರಿಕೆ ಮಾಡಲು ಹೊರಟಿರುವುದು ಸರಿಯಲ್ಲ. ಹಿಂದಿ ದಿವಸ್, ಹಿಂದಿ ಸಪ್ತಾಹಗಳಂತ ಅರ್ಥಹೀನ ಅಸಮಾನತೆ ಕಾರ್ಯಕ್ರಮಗಳನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಹಿಂದಿ ಹಾಗೂ ಇಂಗ್ಲಿಷ್ ಭಾಷೆಗೆ ನೀಡುವ ಮಾನ್ಯತೆಯನ್ನೇ ಎಲ್ಲಾ ಪ್ರಾದೇಶಿಕ ಭಾಷೆಗಳಿಗೂ ನೀಡಬೇಕು. ಹಿಂದಿಗೆ ನೀಡಲಾಗಿರುವ ಹೆಚ್ಚುವರಿ ಮಾನ್ಯತೆಯನ್ನು ಕೂಡಲೇ ರದ್ದುಪಡಿಸಬೇಕು. ಯಾವ ಭಾಷೆಯನ್ನೂ ನಿರ್ಲಕ್ಷ್ಯ ಮಾಡಬಾರದು ಎಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.