ವಿಜಯಪುರ: ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಕೊಟ್ಟ ಭರವಸೆಗಳನ್ನು ಕಾರ್ಯ ರೂಪಕ್ಕೆ ತರುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಸೆ. 22 ರಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹೋರಾಟ ಮಾಡಲಾಗುವುದು ಎಂದು ಎಪಿಯುಟಿಯುಸಿ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಸುನೀಲ ಸಿದ್ರಾಮಶೆಟ್ಟಿ ತಿಳಿಸಿದರು.
ಆಶಾ ಕಾರ್ಯಕರ್ತೆಯ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೆ. 22 ರಂದು ಪ್ರತಿಭಟನೆ - asha workers protest in vijaypur
ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ 22 ರಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಎಪಿಯುಟಿಯುಸಿ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಸುನೀಲ ಸಿದ್ರಾಮಶೆಟ್ಟಿ ತಿಳಿಸಿದರು.
ನಗರದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರು ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಹೋರಾಟ ಮಾಡಿದರು. ಆದರೆ ಸರ್ಕಾರ ಕೇವಲ ಭರವಸೆ ನೀಡಿದೆ. ಮುಷ್ಕರ ಸ್ಥಗಿತಗೊಳಿಸಿ 47 ದಿನಗಳು ಕೆಳದರೂ ಸರ್ಕಾರದಿಂದ ಅಧಿಕೃತ ಘೋಷಣೆಗಳು ಬಂದಿಲ್ಲ. ಕೊರೊನಾ ಫ್ರಂಟ್ ಲೈನ್ ವಾರಿಯರ್ಸ್ ಆಗಿ ಆಶಾ ಕಾರ್ಯಕರ್ತೆಯರು ಕಳೆದ 7 ತಿಂಗಳಿಂದ ಕೆಲಸ ಮಾಡುತ್ತಾ ಬಂದಿದ್ದಾರೆ. ಆದ್ರೆ ಸರ್ಕಾರ ಮಾತ್ರ ಬೇಡಿಕೆಗಳ ಈಡೇರಿಕೆಗೆ ಮುಂದೆ ಬರುತ್ತಿಲ್ಲ ಎಂದು ಸರ್ಕಾರ ವಿರುದ್ಧ ಕಿಡಿಕಾರಿದ್ರು.
ಇನ್ನು ಸೆ.21 ರಿಂದ ಅಧಿವೇಶನ ಆರಂಭವಾಗುತ್ತಿದೆ. ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ 22 ರಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಜಿಲ್ಲಾ ಮಟ್ಟದಲ್ಲಿ ಹೋರಾಟ ನಡೆಸಿ ಸೆ. 23 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುವುದು. ಹೋರಾಟದಲ್ಲಿ ಎಲ್ಲ ಆಶಾ ಕಾರ್ಯಕರ್ತೆಯರು ಪಾಲ್ಗೊಳ್ಳುತ್ತಾರೆ ಎಂದು ಅವರು ತಿಳಿಸಿದರು.