ವಿಜಯಪುರ: ಬೆಂಗಳೂರು ಕಟ್ಟಿದ ಮಹಾನ್ ವ್ಯಕ್ತಿ, ಕನ್ನಡಕ್ಕೆ ಕೆಂಪೇಗೌಡರ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಹೇಳಿದರು.
ಕನ್ನಡಕ್ಕೆ ಕೆಂಪೇಗೌಡರ ಕೊಡುಗೆ ಅಪಾರ: ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ - ಕೆಂಪೇಗೌಡ ಜಯಂತಿ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡ ಜಯಂತಿಯ ಅಂಗವಾಗಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವ್ರು, ಕನ್ನಡ ಕಾಯುವಲ್ಲಿ ಕೆಂಪೇಗೌಡರ ಪಾತ್ರ ಅಮುಲ್ಯವಾಗಿದೆ. ಕರ್ನಾಟಕ ಜನತೆಯ ಮನದಲ್ಲಿ ಕೆಂಪೇಗೌಡರ ಹೆಸ್ರು ಅಜರಾಮವಾಗಿದೆ, ಅವರ ಶ್ರಮ ಫಲ ಇಂದು ಬೆಂಗಳೂರು ನಿರ್ಮಾಣವಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ್ರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಹಾಗೂ ಸಮಾಜದ ಮುಖಂಡರು ಸೇರಿದಂತೆ ಹಲವು ಅಧಿಕಾರಿಗಳು ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು.